Kalaburagi | ಭಾರತೀಯ ಜ್ಞಾನ ಪರಂಪರೆ ಸಂರಕ್ಷಣೆ ಅಗತ್ಯ: ಅರುಣ್‌ಕುಮಾರ್ ಪತ್ತಾರ್

Update: 2026-08-16 21:05 IST

ಕಲಬುರಗಿ: ಭಾರತೀಯ ಜ್ಞಾನ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ ಎಂದು ವಾಸ್ತು ಗುರು ಎರ್. ಅರುಣ್‌ಕುಮಾರ್ ಪತ್ತಾರ್ ಹೇಳಿದರು.

ನಗರದ ವಿಶ್ವೇಶ್ವರಯ್ಯ ಭವನದಲ್ಲಿರುವ ದಿ ಇನ್‌ಸ್ಟಿಟ್ಯೂಷನ್ ಆಫ್ ಎಂಜಿನಿಯರ್ಸ್ (ಇಂಡಿಯಾ), ಕಲಬುರಗಿ ಸ್ಥಳೀಯ ಕೇಂದ್ರದ ಸೆಮಿನಾರ್ ಹಾಲ್‌ನಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ‘ವಾಸ್ತು–ಭಾರತೀಯ ಜ್ಞಾನ ಪರಂಪರೆಯ ಸಂರಕ್ಷಣೆ’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಭಾರತೀಯ ಪರಂಪರೆಯಲ್ಲಿ ವಾಸ್ತುಶಾಸ್ತ್ರಕ್ಕೆ ವಿಶೇಷ ಸ್ಥಾನವಿದೆ. ಅದರಲ್ಲಿರುವ ಜ್ಞಾನ ಹಾಗೂ ವೈಜ್ಞಾನಿಕ ಅಂಶಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ ಸಂರಕ್ಷಿಸುವ ಅಗತ್ಯವಿದೆ. ಆಧುನಿಕ ತಂತ್ರಜ್ಞಾನವನ್ನು ಭಾರತೀಯ ಸಾಂಪ್ರದಾಯಿಕ ಜ್ಞಾನ ಪರಂಪರೆಯೊಂದಿಗೆ ಸಮನ್ವಯಗೊಳಿಸುವ ಮೂಲಕ ಸಮಾಜಕ್ಕೆ ಹೆಚ್ಚಿನ ಪ್ರಯೋಜನ ಕಲ್ಪಿಸಬಹುದು ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೆಕೆಆರ್‌ಡಿಬಿಯ ಕಾರ್ಯನಿರ್ವಾಹಕ ಎಂಜಿನಿಯರ್ ಎರ್. ಆನಂದ್ ಕಮಲಾಪುರಕರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ದಿ ಇನ್‌ಸ್ಟಿಟ್ಯೂಷನ್ ಆಫ್ ಎಂಜಿನಿಯರ್ಸ್ (ಇಂಡಿಯಾ), ಕಲಬುರಗಿ ಸ್ಥಳೀಯ ಕೇಂದ್ರದ ಪದಾಧಿಕಾರಿಗಳು, ಎಂಜಿನಿಯರ್‌ಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News