Kalaburagi | ಕರ್ನಾಟಕ ಮಹಿಳಾ ಪರ ಜನಜಾಗೃತಿ ಸಮಿತಿಯ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ
ಕಲಬುರಗಿ: ಕರ್ನಾಟಕ ಮಹಿಳಾ ಪರ ಜನಜಾಗೃತಿ ಸಮಿತಿಯ ಕಲಬುರಗಿ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳನ್ನು ರಾಜ್ಯ ಸಮಿತಿಯ ಅನುಮೋದನೆಯ ಮೇರೆಗೆ ನೇಮಕ ಮಾಡಲಾಗಿದೆ ಎಂದು ಸಮಿತಿಯ ರಾಜ್ಯಾಧ್ಯಕ್ಷೆ ಜಗದೇವಿ ಆರ್. ಹೆಗಡೆ ತಿಳಿಸಿದ್ದಾರೆ.
ಸಮಿತಿಯ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷೆಯಾಗಿ ಮಲ್ಲಮ್ಮ ಅವಂಟಿ ಹಾಗೂ ಉಪಾಧ್ಯಕ್ಷೆಯಾಗಿ ಗುಂಡಮ್ಮ ಜನಿವಾರ್ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆಯುವ ಅನ್ಯಾಯ, ಅತ್ಯಾಚಾರ, ಶೋಷಣೆ ಹಾಗೂ ದೌರ್ಜನ್ಯಗಳ ವಿರುದ್ಧ ಸಂವಿಧಾನಬದ್ಧವಾಗಿ ಹೋರಾಟ ನಡೆಸಿ, ಸಂತ್ರಸ್ತ ಮಹಿಳೆಯರಿಗೆ ನ್ಯಾಯ ದೊರಕಿಸಿಕೊಡುವುದು ಸಮಿತಿಯ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸಂಘಟನೆಯನ್ನು ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಬಲಪಡಿಸುವುದರೊಂದಿಗೆ ಮಹಿಳೆಯರ ಹಕ್ಕುಗಳ ರಕ್ಷಣೆ ಮತ್ತು ಅವರ ಕ್ಷೇಮಾಭಿವೃದ್ಧಿಗಾಗಿ ನೂತನ ಪದಾಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಜಗದೇವಿ ಆರ್. ಹೆಗಡೆ ತಿಳಿಸಿದ್ದಾರೆ.