ಕಲಬುರಗಿ: ಚಿಂಚೋಳಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಸಂಜೀವ ಕುಮಾರ ಪಾಟೀಲ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವೆಂಕಟೇಶ ದುದ್ಯಾಲ್ ಅವರು ಆಯ್ಕೆಯಾಗಿದ್ದಾರೆ.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರ ಆದೇಶದ ಮೇರೆಗೆ ಜಿಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ಮತದಾನದ ಮೂಲಕ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಯ ಆಯ್ಕೆ ನಡೆಯಿತು.

ಚುನಾವಣಾ ಪ್ರಕ್ರಿಯೆಯಲ್ಲಿ ಸಂಘದ ಜಿಲ್ಲಾ ಉಪಾಧ್ಯಕ್ಷ ಅರುಣಕುಮಾರ ಕದಂ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಭೀಮಾಶಂಕರ ಫಿರೋಜಾಬಾದ್, ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಸದಸ್ಯ ದೇವೇಂದ್ರಪ್ಪ ಕಪನೂರ, ಜಿಲ್ಲಾ ಕಾರ್ಯದರ್ಶಿ ಅನಿಲ್ ಸ್ವಾಮಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಕ್ರಂಪಾಶಾ ಮೋಮಿನ್ ಭಾಗವಹಿಸಿದ್ದರು.

ಈ ವೇಳೆ ನೂತನ ಪದಾಧಿಕಾರಿಗಳಿಗೆ ಶುಭ ಕೋರಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೀಮಾಶಂಕರ ಫಿರೋಜಾಬಾದ, ಸಂಘದ ಘನತೆ ಗೌರವ ಹೆಚ್ಚಿಸುವ ನಿಟ್ಟಿನಲ್ಲಿ ವೃತ್ತಿಪರತೆ ಯಿಂದ ನಡೆದುಕೊಳ್ಳಬೇಕು. ಪತ್ರಿಕೋದ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿ ಸಮಾಜದ ಆಗುಹೋಗುಗಳನ್ನು ಜನರ ಮುಂದಿಡುವ ಮಹತ್ವದ ಜವಾಬ್ದಾರಿ ಹೊಂದಿದೆ. ಈ ಹಿನ್ನೆಲೆಯಲ್ಲಿ ಪತ್ರಕರ್ತರ ಸಂಘಟನೆ ಬಲಿಷ್ಠವಾಗಿರುವುದು, ಪತ್ರಕರ್ತರ ವೃತ್ತಿಪರ ಹಕ್ಕುಗಳ ರಕ್ಷಣೆ ಹಾಗೂ ಪರಸ್ಪರ ಸಹಕಾರಕ್ಕೆ ಆದ್ಯತೆ ನೀಡುವುದು ಅಗತ್ಯವಾಗಿದೆ ಎಂದರು.

ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಸದಸ್ಯ ದೇವಿಂದ್ರಪ್ಪ ಕಪನೂರ ಮಾತನಾಡಿ, ನೂತನ ಅಧ್ಯಕ್ಷ ಸಂಜೀವಕುಮಾರ ಪಾಟೀಲ ಹಾಗೂ ಪ್ರಧಾನ ಕಾರ್ಯದರ್ಶಿ ವೆಂಕಟೇಶ ದುದ್ಯಾಲ್ ಅವರ ನೇತೃತ್ವದಲ್ಲಿ ಸಂಘವು ಇನ್ನಷ್ಟು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿ, ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸುವ ವೇದಿಕೆಯಾಗಿ ರೂಪುಗೊಳ್ಳಲಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor