ಕಲಬುರಗಿ: ವಿಧಾನ ಪರಿಷತ್‌ನ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಶರಣಪ್ಪ ಮಟ್ಟೂರ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.

ನಗರದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಚುನಾವಣಾಧಿಕಾರಿಯೂ ಆಗಿರುವ ಪ್ರಾದೇಶಿಕ ಆಯುಕ್ತೆ ಝಹೀರಾ ನಸೀಮ್ ಅವರಿಗೆ ಶರಣಪ್ಪ ಮಟ್ಟೂರ ಅವರು ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ಅಲ್ಲಮಪ್ರಭು ಪಾಟೀಲ್ ಹಾಗೂ ಖನಿಜ್ ಫಾತಿಮಾ ಸೇರಿದಂತೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಈಶಾನ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶರಣಪ್ಪ ಮಟ್ಟೂರ ಅವರ ನಾಮಪತ್ರ ಸಲ್ಲಿಕೆ ವೇಳೆ ಪಕ್ಷದ ಮುಖಂಡರು ಹಾಗೂ ಬೆಂಬಲಿಗರು ಉಪಸ್ಥಿತರಿದ್ದು, ಅಭ್ಯರ್ಥಿಗೆ ಶುಭ ಹಾರೈಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor