Kalaburagi | ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಎನ್‌ಡಿಎ ಅಭ್ಯರ್ಥಿಯಾಗಿ ಶಶೀಲ್ ನಮೋಶಿ ನಾಮಪತ್ರ ಸಲ್ಲಿಕೆ
ಕಲಬುರಗಿ: ವಿಧಾನ ಪರಿಷತ್‌ನ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ಬಿಜೆಪಿ-ಜೆಡಿಎಸ್ ಒಕ್ಕೂಟದ (ಎನ್‌ಡಿಎ) ಅಭ್ಯರ್ಥಿಯಾಗಿ ಶಶೀಲ್ ನಮೋಶಿ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.
ನಗರದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಚುನಾವಣಾಧಿಕಾರಿಯೂ ಆಗಿರುವ ಪ್ರಾದೇಶಿಕ ಆಯುಕ್ತೆ ಝಹೀರಾ ನಸೀಮ್ ಅವರಿಗೆ ಶಶೀಲ್ ನಮೋಶಿ ಅವರು ತಮ್ಮ ನಾಮಪತ್ರವನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವರಾದ ಬಂಡೆಪ್ಪ ಖಾಶೆಂಪುರ್, ಮಾಜಿ ಸಂಸದ ಉಮೇಶ್ ಜಾಧವ್ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಈಶಾನ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಒಕ್ಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶಶೀಲ್ ನಮೋಶಿ ಅವರ ನಾಮಪತ್ರ ಸಲ್ಲಿಕೆ ವೇಳೆ ಪಕ್ಷದ ಮುಖಂಡರು ಹಾಗೂ ಬೆಂಬಲಿಗರು ಉಪಸ್ಥಿತರಿದ್ದು, ಅಭ್ಯರ್ಥಿಗೆ ಶುಭ ಹಾರೈಸಿದರು.