Kalaburagi | ಮಲ್ಲಿಕಾರ್ಜುನ ಖರ್ಗೆ ಜನ್ಮದಿನ ಅಂಗವಾಗಿ ಎನ್‌ಎಸ್‌ಯುಐಯಿಂದ ಸಸಿ ನೆಡುವ ಕಾರ್ಯಕ್ರಮ

ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸುವಂತೆ ಡಾ.ಗೌತಮ ಕರಿಕಲ್ ಕರೆ

Update: 2026-07-20 20:39 IST

ಕಲಬುರಗಿ: ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ 84ನೇ ಜನ್ಮದಿನದ ಅಂಗವಾಗಿ ಎನ್‌ಎಸ್‌ಯುಐ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಸಸಿ ನೆಡುವ ಕಾರ್ಯಕ್ರಮ ನಡೆಯಿತು.

ಶಂಕರ್ ಸಿಂಗ್ ಮೆಮೋರಿಯಲ್ ಟ್ರಸ್ಟ್ ಆಶ್ರಯದಲ್ಲಿ ನಾಗನಳ್ಳಿ ಕ್ರಾಸ್‌ನ ಆರ್ಯನ್ ಇಂಗ್ಲಿಷ್ ಮೀಡಿಯಂ ಶಾಲೆ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಎನ್‌ಎಸ್‌ಯುಐ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಗೌತಮ ಕರಿಕಲ್ ನೇತೃತ್ವ ವಹಿಸಿದ್ದರು.

ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು ಸಸಿ ನೆಟ್ಟು, ಅವುಗಳನ್ನು ಸಂರಕ್ಷಿಸುವ ಸಂಕಲ್ಪ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಗೌತಮ ಕರಿಕಲ್, ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಕೇವಲ ಸಸಿ ನೆಡುವುದಷ್ಟೇ ಅಲ್ಲ, ಅವುಗಳನ್ನು ಪೋಷಿಸಿ ಬೆಳೆಸುವ ಮೂಲಕ ಹಸಿರು ಪರಿಸರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶಂಕರ್ ಸಿಂಗ್ ಮೆಮೋರಿಯಲ್ ಟ್ರಸ್ಟ್ನ ಕಾರ್ಯದರ್ಶಿ ಸಂಜಯ್ ಸಿಂಗ್, ಈರಣ್ಣ ಝಳಕ್ಕಿ, ಶಿವಾನಂದ ಹೋನಗುಂಟಿ, ಸಚಿನ್ ಶಿರವಾಳ, ರೇಣುಕಾ ಸಿಂಗೆ, ಅಶೋಕ್ ಕಪನೂರ್, ಶಕೀಲ್ ಸರಡಗಿ, ಟೈಗರ್ ವಿಗ್ನೇಶ್ವರ, ಗೀತಾ ಮುದಗೋಳ, ಸಚಿನ್ ಬಂಡೆ, ರವಿ ಈಶ್ವರ್, ಸಚಿನ್ ಪಂಗಾರಗಿ, ಸಂತೋಷ್ ಎಸ್.ಪಿ., ಅಣವೀರ, ಆರ್ಯನ್ ಶಾಲೆ-ಕಾಲೇಜಿನ ವಿದ್ಯಾರ್ಥಿಗಳು, ಎನ್‌ಎಸ್‌ಯುಐ ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News