×
Ad

ಕಲಬುರಗಿ | ಆನ್‌ಲೈನ್ ವಿಡಿಯೋ ಗೇಮ್ ಚಟ ಹೊಂದಿದ್ದ ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆ

Update: 2024-12-06 10:40 IST

ಕಲಬುರಗಿ:  ಆನ್‌ಲೈನ್ ವಿಡಿಯೋ ಗೇಮ್ ಚಟಕ್ಕೆ ಬಿದ್ದಿದ್ದ ನರ್ಸಿಂಗ್ ವಿದ್ಯಾರ್ಥಿಯೋರ್ವ ಅದರಿಂದ ಹೊರ ಬಾರಲಾರದೇ ಮಾನಸಿಕ ಸ್ಥಿಮಿತ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಪಕ್ಕದಲ್ಲಿರುವ ವೀರಶೈವ ವಸತಿ ನಿಲಯದ ಆವರಣದಲ್ಲಿ ನಡೆದಿದೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಡೋಣಗಾಪುರದ ಸೋಮನಾಥ ಚಿದ್ರೆ(22)  ಆತ್ಮಹತ್ಯೆಗೆ ಮಾಡಿಕೊಂಡ ವಿದ್ಯಾರ್ಥಿ. ಈತ ಜಿಮ್ಸ್ ಆಸ್ಪತ್ರೆಯ ನರ್ಸಿಂಗ್ ಕೋರ್ಸ್‌ ನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದು, ಆನ್ ಲೈನ್ ನಲ್ಲಿ ಗೇಮ್ ಗಳನ್ನು ಆಡುವುದರಲ್ಲೇ ಬ್ಯುಸಿಯಾಗಿದ್ದ ಎನ್ನಲಾಗಿದೆ. ಇದರಿಂದ ಹೊರಬಾರಲಾಗದೆ ಮಾನಸಿಕವಾಗಿ ಸ್ಥಿಮಿತ ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆತನ ತಂದೆ ಸತೀಶಕುಮಾರ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಹೊಲ ಮತ್ತು ಮನೆಯಲ್ಲಿರುವ ಚಿನ್ನ ಅಡವಿಟ್ಟು  ಲಕ್ಷಾಂತರ ರೂ. ಸಾಲ ಮಾಡಿ ಮಗನ ವಿದ್ಯಾಭ್ಯಾಸಕ್ಕೆ ವ್ಯಯಿಸಿದ್ದೆ. ಆದರೆ  ಆನ್‌ಲೈನ್ ವಿಡಿಯೋ ಚಟದಲ್ಲೇ ಮಗ ನಮ್ಮನ್ನು ಬಿಟ್ಟು ಅಗಲಿದ್ದಾನೆಂದು ದೂರಿನಲ್ಲಿ ವಿವರಿಸಿದ್ದಾರೆ.

ಈ ಕುರಿತು ಬ್ರಹ್ಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News