ಕಲಬುರಗಿ | ಅ.23 ರಂದು ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಮತದಾರರಿಗೆ ರಜೆ ಘೋಷಣೆ
ಝಹೀರಾ ನಸೀಮ್
ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಅ. 23 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ಕ್ಷೇತ್ರದಾದ್ಯಂತ ನಡೆಯಲಿದ್ದು, ಮತ ಚಲಾಯಿಸಲು ಅನುಕೂಲವಾಗುವಂತೆ ಕ್ಷೇತ್ರದ ನೊಂದಾಯಿತ ಮತದಾರರಿಗೆ ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಝಹೀರಾ ನಸೀಮ್ ಅವರು ರಜೆ ಘೋಷಿಸಿದ್ದಾರೆ.
ಮತ ಎಣಿಕೆ ಕಾರ್ಯವು ಅ. 27 ರಂದು ಬೆಳಿಗ್ಗೆ 8 ಗಂಟೆಯಿಂದ ಕಲಬುರಗಿಯ ಗುಲ್ಬರ್ಗಾ ವಿಶ್ವವಿದ್ಯಾಲಯದ ಗಣಿತ ವಿಭಾಗದ ಭಾಸ್ಕರ ಸಭಾಂಗಣದಲ್ಲಿ ನಡೆಯಲಿದ್ದು, ಅಂದು ಗಣಿತ ವಿಭಾಗದ ಕಟ್ಟಡ ಮತ್ತು ಭದ್ರತಾ ಕೊಠಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೂ ಸಹ ರಜೆ ಘೋಷಿಸಲಾಗಿದೆ.