ಕಲಬುರಗಿ | ಬಾಲ್ಯ ವಿವಾಹ ಮುಕ್ತ ಜಿಲ್ಲೆಯಾಗಿಸಲು ಅಧಿಕಾರಿಗಳು ಕೈಜೋಡಿಸಬೇಕು : ಡಿಸಿ ಫೌಝಿಯಾ ತರನ್ನುಮ್
ಕಲಬುರಗಿ : ಕಲಬುರಗಿ ಜಿಲ್ಲೆಯನ್ನು ಬಾಲ್ಯ ವಿವಾಹಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲಾ ಇಲಾಖೆಯ ಅಧಿಕಾರಿಗಳು ಕೈಜೋಡಿಸಬೇಕೆಂದು ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಹೇಳಿದರು.
ಸೋಮವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಯೋಜನೆಗಳ ಜಿಲ್ಲಾಮಟ್ಟದ ಸಮನ್ವಯ ಸಮಿತಿಅ ಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿಕಂಡು ಬರುತ್ತಿದ್ದು, ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೆ ಕೆಲಸ ನಿರ್ವಹಿಸಿ, ಹಳ್ಳಿಗಳಲ್ಲಿ ನಡೆಯುವ ಬಾಲ್ಯ ವಿವಾಹದ ಕುರಿತು ಮಾಹಿತಿ ಪಡೆದು ಇದನ್ನು ತಡೆಯಬೇಕು. ಬಾಲ್ಯ ವಿವಾಹ ತಡೆದು ಅತಿ ಹೆಚ್ಚು ಪ್ರಕರಣಗಳು ದಾಖಲಿಸಿ ಕ್ರಮ ಕೈಗೊಳ್ಳಬೇಕು. ಸಂಬಂಧಪಟ್ಟ ಅಧಿಕಾರಿಗಳೂ ಇದನ್ನುನಿರ್ಲಕ್ಷ್ಯ ವಹಿಸಿದ್ದಲ್ಲಿ ಶಿಸ್ತಿನ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಚ್ಚರಿಸಿದರು.
ಸೀಮಂತ ಕಾರ್ಯಕ್ರಮವು ಕೇವಲ ಅಂಗನವಾಡಿ ಕೇಂದ್ರಗಳಲ್ಲಿ ಸಿಮಿತವಾಗದೇ ದೊಡ್ಡ ಪ್ರಮಾಣ ಕಾರ್ಯಕ್ರಮವನ್ನು ಆಯೋಜನೆ ಮಾಡಬೇಕು. ಜತೆಗೆ ಕಾರ್ಯಕ್ರಮದಲ್ಲಿ ಯಾವ ಆಹಾರವು ಪೌಷ್ಠಿಕಾಂಶದಿಂದ ಕೂಡಿರುತ್ತದೆ ಎಂಬುವುದನ್ನು ಅಧಿಕಾರಿಗಳು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಪ್ರಧಾನಮಂತ್ರಿ ಮಾತೃವಂದನಾ ಯೋಜನೆಗೆ ನಿಗದಿಪಡಿಸಿದ ಗುರಿ ಪ್ರತಿಯೊಬ್ಬರು ಸಾಧಿಸಬೇಕು. ಕೆಲವೊಂದು ಅಧಿಕಾರಿಗಳು ಸಾಧನೆ-ಗುರಿ ಮುಟ್ಟಿರುವುದಿಲ್ಲ, ಅವರು ಹೆಚ್ಚಿನ ರೀತಿಯಲ್ಲಿ ಶ್ರಮಿಸಬೇಕು. ಎಲ್ಲಾ ಯೋಜನೆಗಳಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳು ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮತ್ತು ಮೇಲ್ವಿಚಾರಕಿಯರು ಜಂಟಿ ಸಭೆಯನ್ನು ನಡೆಸಿ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಕೇಂದ್ರ ಸರ್ಕಾರದ ಯೋಜನೆಯಾದ ಬೇಟಿ ಬಚಾವೊ ಭೇಟಿ ಪಡಾವೂ ಯೋಜನೆಯಡಿ ಹತ್ತು ಲಕ್ಷ ರೂ. ಅನುದಾನ ನೀಡಿದ್ದು, ಇದನ್ನು ಸಮರ್ಪಕವಾಗಿ ಬಳಕೆ ಮಾಡಬೇಕು. ಈ ಯೋಜನೆ ಕುರಿತು ಅಧಿಕಾರಿಗಳು ಹೆಚ್ಚಿನ ರೀತಿಯಲ್ಲಿ ಜಾಗೃತಿ ಮೂಡಿಸಿ ಪ್ರತಿಯೊಬ್ಬ ಫಲಾನುಭವಿಗಳು ಇದರ ಲಾಭವನ್ನು ಪಡೆಯಬೇಕೆಂದು ಹೇಳಿದರು.
ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಆಧಾರ್ ಕಾರ್ಡ್ ಸಮಸ್ಯೆ ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಇಲ್ಲದಿರುವುದು ಫಲಾನುಭವಿಗಳ ಸಂಬಂಧಪಟ್ಟ ಅಧಿಕಾರಿಗಳು ತಿಳಿಸಬೇಕೆಂದು ಹೇಳಿದರು.
ಬಾಲಕಿಯರ ವಸತಿ ನಿಲಯಗಳಿಗೆ ಅನಿರೀಕ್ಷತವಾಗಿ ಭೇಟಿ ನೀಡಿ, ವಸತಿ ನಿಲಯದ ಸುತ್ತಮುತ್ತ ಸ್ವಚ್ಛತೆ, ನೀರಿನ ಸಮಸ್ಯೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಹಿಳಾ ಸಹಾಯವಾಣಿಗೆ ಕಡಿಮೆ ಸಂಖ್ಯೆಯಲ್ಲಿ ಕರೆಗಳು ಬಂದಿದ್ದು, ಮಹಿಳಾ ಸಹಾಯವಾಣಿ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸಲು ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ, ಹೆಚ್ಚುವರಿ ಎಸ್.ಪಿ. ಮಹೇಶ ಮೇಘಣ್ಣನವರ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಎಸ್.ಎಸ್. ಮಠಪತಿ, ಎಸಿಪಿ ಶರಣಬಸಪ್ಪ ಸುಬೇದಾರ, ಡಿ.ಹೆಚ್.ಓ. ಡಾ. ಶರಣಬಸಪ್ಪ ಕ್ಯಾತನಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಕುಮಾರ ರಾಠೋಡ, ಮಹಿಳಾ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಮಂಜುಳಾ ವಿ. ಪಾಟೀಲ್, ಜಿಲ್ಲಾಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ಜಗದೀಶ್ ಕೆ.ಜಿ, ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿ.ಡಿ.ಪಿ.ಓ ಸೇರಿದಂತೆ ವಿವಿಧ ಸಂಘ -ಸಂಸ್ಥೆಗಳು ಭಾಗವಹಿಸಿದ್ದರು.