Kalaburagi | ಮೇ 26ರಂದು ಶಿಶಿಕ್ಷು, ಉದ್ಯೋಗ ಮೇಳ
ಕಲಬುರಗಿ: ಕಲಬುರಗಿ ಸರ್ಕಾರಿ (ಪುರುಷ) ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಐ.ಟಿ.ಐ ಪಾಸಾದ ಹಾಗೂ ಪ್ರಸ್ತುತ ಕೊನೆಯ ವರ್ಷದಲ್ಲಿ ಅಭ್ಯಸಿಸುತ್ತಿರುವ ತರಬೇತಿದಾರರಿಗೆ 2026ರ ಮೇ 26 ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ಸರ್ಕಾರಿ (ಪುರುಷ) ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಶಿಕ್ಷು ಹಾಗೂ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಳಾಗಿದೆ ಎಂದು ಕಲಬುರಗಿ ಸರ್ಕಾರಿ (ಪುರುಷ) ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಈ ಶಿಶಿಕ್ಷು ಹಾಗೂ ಉದ್ಯೋಗ ಮೇಳದಲ್ಲಿ ಕಲಬುರಗಿ ಮತ್ತು ಬೆಂಗಳೂರು ಹಾಗೂ ಸುತ್ತಮುತ್ತಲಿನ ಸುಮಾರು 20ಕ್ಕೂ ಹೆಚ್ಚು ವಿವಿಧ ಬೃಹತ್ ಮತ್ತು ಮದ್ಯಮ ಹಾಗೂ ಸಣ್ಣ ಕೈಗಾರಿಕಾ ಉದ್ಯಮೇದಾರರು ಭಾಗವಹಿಸುತ್ತಿದ್ದು, ಇಚ್ಚೆಯುಳ್ಳ ಅಭ್ಯರ್ಥಿಗಳು ಮೇಲ್ಕಂಡ ದಿನದಂದು ನಡೆಯುವ ಶಿಶಿಕ್ಷು ಹಾಗೂ ಉದ್ಯೋಗ ಮೇಳಕ್ಕೆ ಬಯೋಡೆಟಾ, ಎಸ್.ಎಸ್.ಎಲ್.ಸಿ ಮತ್ತು ಐಟಿಐ ಅಂಕಪಟ್ಟಿ, ಎರಡು ಭಾವಚಿತ್ರ, ಆಧಾರ್ ಕಾರ್ಡ್, ಹಾಗೂ ಇತರೆ ಮೂಲ ದಾಖಲಾತಿಗಳ ಪ್ರತಿಗಳೊಂದಿಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ), ಎಂ.ಎಸ್.ಕೆ.ಮಿಲ್ ರಸ್ತೆ, ಕಲಬುರಗಿ ಇಲ್ಲಿ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಸೂಚನಾ ಫಲಕವನ್ನು ಹಾಗೂ ಮೊಬೈಲ್ ಸಂಖ್ಯೆ-9844778565, 9481539511 ಮತ್ತು 9535806620 ಗಳಿಗೆ ಸಂಪರ್ಕಿಸಲು ಕೋರಲಾಗಿದೆ