Kalaburagi | ಒಂದು ದಿನದ ಉದ್ಯಮಶೀಲತಾಭಿವೃದ್ಧಿ ಜಾಗೃತಿ ಶಿಬಿರ: ಹೆಸರು ನೋಂದಣಿಗೆ ಸೂಚನೆ
ಕಲಬುರಗಿ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ ಕಲಬುರಗಿ (ಸಿಡಾಕ್) ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ ಮೂಲಕ ಸ್ವಯಂ ಉದ್ಯೋಗ ಪ್ರಾರಂಭಿಸಲು ಆಸಕ್ತಿಯುಳ್ಳ ಎಲ್ಲಾ ವರ್ಗದ ಮಹಿಳೆಯರಿಗೆ ಒಂದು ದಿನದ ಉದ್ಯಮಶೀಲತಾಭಿವೃದ್ಧಿ ಜಾಗೃತಿ ಶಿಬಿರವನ್ನು 2026ರ ಜುಲೈ ಮೂರನೇ ವಾರದಲ್ಲಿ ಕಲಬುರಗಿ ಎಂ.ಎಸ್.ಕೆ. ಮಿಲ್ ರಸ್ತೆಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ (ವಿಭಾಗೀಯ) ಜಂಟಿ ನಿರ್ದೇಶಕರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಸಿಡಾಕ್ ಸಲಹೆಗಾರರು ತಿಳಿಸಿದ್ದಾರೆ.
ಈ ಶಿಬಿರದಲ್ಲಿ ಉದ್ಯಮಶೀಲತೆಯ ಪರಿಚಯ, ಸ್ವ-ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಬ್ಯಾಂಕಿನ ವ್ಯವಹಾರ, ಉದ್ಯಮಗಳನ್ನು ಪ್ರಾರಂಭಿಸಲು ಸಾಲ ಸೌಲಭ್ಯಕ್ಕಾಗಿ ಇರುವ ಸರ್ಕಾರದ ಯೋಜನೆಗಳು ಮತ್ತು ಇತ್ಯಾದಿ ವಿಷಯಗಳ ಕುರಿತು ಮಾಹಿತಿಯನ್ನು ನೀಡಲಾಗುತ್ತದೆ.
ವಯೋಮಿತಿ 20 ರಿಂದ 40 ವರ್ಷ ವಯೋದೊಳಗಿನ ಮತ್ತು ಕನಿಷ್ಠ ಎಸ್.ಎಸ್.ಎಲ್.ಸಿ. ಪಾಸ್/ಫೇಲಾದ ಎಲ್ಲಾ ವರ್ಗದ ಮಹಿಳೆಯರು ಮೊಬೈಲ್ ಸಂಖ್ಯೆ 8884872109, 9108972833 ಗಳಿಗೆ ಕರೆ ಮಾಡಿ ಅಥವಾ ಸದರಿ ಕಛೇರಿಗೆ ಬಂದು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.