×
Ad

ಕಲಬುರಗಿ | ಮನೆಗೊಂದು ಗ್ರಂಥಾಲಯ ಯೋಜನೆ ಅಭಿಯಾನ

Update: 2026-01-02 20:46 IST

ಕಲಬುರಗಿ: ಇಲ್ಲಿನ ಶಹಾಬಜಾರ ನಾಕಾದಲ್ಲಿರುವ ಶಿಕ್ಷಣ ಪ್ರೇಮಿ ರಾಜಶೇಖರ ಚೌದ್ರಿ ಅವರ ಮನೆಯಲ್ಲಿ ಗ್ರಂಥಾಲಯ ನಿರ್ಮಿಸುವ ಮೂಲಕ ಕನ್ನಡ ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಯೋಜನೆಗೆ ಚಾಲನೆ ನೀಡಲಾಯಿತು.

ಮನೆಯ ಗ್ರಂಥಾಲಯವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಇಂದಿನ ಒತ್ತಡದ ಬದುಕಿನಲ್ಲಿ ಮಕ್ಕಳಲ್ಲಿ ಓದುವ ಸಂಸ್ಕೃತಿ ಕಡಿಮೆಯಾಗಿದೆ. ಈ ದಿಸೆಯಲ್ಲಿ ಓದುವ ಅಭಿರುಚಿ ಬೆಲೆಸುವ ನಿಟ್ಟಿನಲ್ಲಿ ಮನೆಯಿಂದಲೇ ಆರಂಭವಾಗಲಿ ಎಂಬ ಆಶಯದೊಂದಿಗೆ ಕನ್ನಡ ಪುಸ್ತಕ ಪ್ರಾಧಿಕಾರ ಹೊಸ ಯೋಜನೆ ಅನುಷ್ಠಾನಗೊಳಿಸಿದ್ದು, ಅದರ ಸದುಪಯೋಗವಾಗಬೇಕಾದರೆ ಮಕ್ಕಳಿಗೆ ಪುಸ್ತಕ ಓದು, ಬರಹಗಳತ್ತ ಆಸಕ್ತಿ ಮೂಡಿಸಬೇಕು ಎಂದರು.

ಮನೆಗೊಂದು ಗ್ರಂಥಾಲಯ ಜಾಗೃತ ಸಮಿತಿ ಸದಸ್ಯ ರಾಜಶೇಖರ ಚೌದ್ರಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿಂದ ಪ್ರಕಟಿಸಿದ ಕೃತಿಗಳನ್ನು ಗ್ರಂಥಾಲಯಕ್ಕೆ ಉಡುಗೊರೆಯಾಗಿ ನೀಡಿದರು.

ಜಿಲ್ಲಾ ಕಸಾಪದ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್.ಧನ್ನಿ, ನ್ಯಾಯವಾದಿ ವಿನೋದಕುಮಾರ ಜೆ.ಎಸ್., ಅಫಜಲಪೂರ ಕಸಾಪ ನೂತನ ಅಧ್ಯಕ್ಷೆ ಪ್ರಭಾವತಿ ಮೇತ್ರಿ, ಕಾರ್ಯದರ್ಶಿ ಪರಮಾನಂದ ಸರಸಂ, ಜಯಶ್ರೀ ಚೌದ್ರಿ, ಬಸವರಾಜ ಸಜ್ಜನ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News