ಸಾಂದರ್ಭಿಕ ಚಿತ್ರ PC | GROK

ಕಲಬುರಗಿ: ರಸ್ತೆ ಅಪಘಾತ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಂಚಾರ ಪೊಲೀಸ್ ಠಾಣೆ–2ರ ಆವರಣದಲ್ಲಿ ಬಹುಕಾಲದಿಂದ ಉಳಿದಿರುವ 109 ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಮಾಲೀಕರು ಅಗತ್ಯ ದಾಖಲೆಗಳನ್ನು ಸಲ್ಲಿಸಿ ತಮ್ಮ ವಾಹನಗಳನ್ನು ಶೀಘ್ರವಾಗಿ ವಶಕ್ಕೆ ಪಡೆದುಕೊಳ್ಳುವಂತೆ ಸಂಚಾರ ಪೊಲೀಸ್ ಠಾಣೆ–2ರ ಆರಕ್ಷಕ ನಿರೀಕ್ಷಕರು ಸೂಚಿಸಿದ್ದಾರೆ.

ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವಂತೆ, ಬಹುಕಾಲದಿಂದ ಠಾಣೆ ಆವರಣದಲ್ಲಿ ನಿಂತಿರುವ ವಾಹನಗಳು ಮಳೆ, ಬಿಸಿಲಿಗೆ ಸಿಲುಕಿ ತುಕ್ಕು ಹಿಡಿಯುತ್ತಿದ್ದು, ಕ್ರಮೇಣ ಬಳಕೆಗೆ ಬಾರದ ಸ್ಥಿತಿಗೆ ತಲುಪುವ ಸಾಧ್ಯತೆ ಇದೆ.

ಆದ್ದರಿಂದ ವಾಹನಗಳ ಮಾಲೀಕರು ಮಾಲೀಕತ್ವಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸಿ, ಕಾನೂನುಬದ್ಧ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ತಮ್ಮ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ನಿಗದಿತ ಅವಧಿಯೊಳಗೆ ದಾಖಲೆಗಳನ್ನು ಸಲ್ಲಿಸಿ ವಾಹನಗಳನ್ನು ತೆಗೆದುಕೊಂಡು ಹೋಗದಿದ್ದರೆ, ನಿಯಮಾನುಸಾರ ವಾಹನಗಳನ್ನು ಹರಾಜು ಮಾಡುವ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಹೀಗಾಗಿ ಸಂಬಂಧಪಟ್ಟ ವಾಹನ ಮಾಲೀಕರು ಯಾವುದೇ ವಿಳಂಬ ಮಾಡದೆ ಕಲಬುರಗಿ ಸಂಚಾರ ಪೊಲೀಸ್ ಠಾಣೆ–2ಕ್ಕೆ ಭೇಟಿ ನೀಡಿ ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ ವಾಹನಗಳನ್ನು ವಶಕ್ಕೆ ಪಡೆಯುವಂತೆ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor