×
Ad

ಕಲಬುರಗಿ | ನಿಗದಿತ ಸಮಯಕ್ಕೆ ವಿಮಾನ ನಿಲ್ದಾಣಕ್ಕೆ ಬರಲು ಪ್ರಯಾಣಿಕರಲ್ಲಿ ಮನವಿ

Update: 2025-05-09 18:45 IST

ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣದಲ್ಲಿ ಎಲ್ಲಾ ಆಗಮನ ಮತ್ತು ನಿರ್ಗಮನ ಕಾರ್ಯಾಚರಣೆಗಳು ಎಂದಿನಂತೆ ಮುಂದುವರೆದಿದ್ದು, ನಡೆಯುತ್ತಿರುವ ಪರಿಸ್ಥಿತಿಯಿಂದಾಗಿ, ಭದ್ರತಾ ತಪಾಸಣೆಗಳು ಸಾಮಾನ್ಯಕ್ಕಿಂತ ಹೆಚ್ಚು ಸಮಯ ತೆಗೆದುಕೊಳ್ಳುವುದರಿಂದ ನಿಗದಿತ ಸಮಯಕ್ಕೆ ಪ್ರಯಾಣಿಕರು ಆಗಮಿಸಲು ಹಾಗೂ ಸಹಕರಿಸಲು ಕಲಬುರಗಿ ವಿಮಾನ ನಿಲ್ದಾಣ ನಿರ್ದೇಶಕರಾದ ಮಹೇಶ್ ಅವರು ಮನವಿ ಮಾಡಿಕೊಂಡಿದ್ದಾರೆ.

ಪ್ರಯಾಣಿಕರ ಸುಗಮ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಮತ್ತು ಕೊನೆಯ ಕ್ಷಣದ ಅನಾನುಕೂಲತೆಯನ್ನು ತಪ್ಪಿಸಲು ಪ್ರಯಾಣಿಕರು ನಿರ್ಗಮನಕ್ಕೆ ಕನಿಷ್ಠ ಎರಡು ಗಂಟೆಗಳ ಮೊದಲು ವಿಮಾನ ನಿಲ್ದಾಣವನ್ನು ತಲುಪಲು ಮನವಿ ಮಾಡಿಕೊಂಡಿದ್ದಾರೆ.

ಇದಲ್ಲದೆ, ಈ ಸಂದರ್ಭದಲ್ಲಿ ಭದ್ರತೆಯ ದೃಷ್ಟಿಯಿಂದ ಯಾವುದೇ ಸಂದರ್ಶಕರ ಪಾಸ್‌ಗಳನ್ನು ನೀಡಲಾಗುವುದಿಲ್ಲ ಮತ್ತು ವಿಮಾನ ನಿಲ್ದಾಣದಲ್ಲಿ ಸ್ವೀಕರಿಸಲು/ಬಿಡಲು ಅತಿಥಿಗಳ ಸಂಖ್ಯೆಯನ್ನು ಕಡಿಮೆ ಮಾಡಲು ಪ್ರಯಾಣಿಕರನ್ನು ವಿನಂತಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರಯಾಣಿಕರ ಸಹಕಾರ ಮತ್ತು ತಿಳುವಳಿಕೆಯನ್ನು ನಾವು ಪ್ರಶಂಸಿಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News