×
Ad

ಕಲಬುರಗಿ: ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ

Update: 2024-06-23 11:16 IST

ಕಲಬುರಗಿ, ಜೂ.23: ನೇಣು ಬಿಗಿದುಕೊಂಡು ಪೊಲೀಸ್ ಕಾನ್ ಸ್ಟೇಬಲ್ ಓರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಉದನೂರ ರಸ್ತೆಯಲ್ಲಿರುವ ಜಮೀನಿನಲ್ಲಿ ನಿನ್ನೆ ರಾತ್ರಿ ನಡೆದಿರುವುದು ವರದಿಯಾಗಿದೆ.

ಮಾಡಬೂಳ ಠಾಣೆಯ ಪೊಲೀಸ್ ಕಾನ್ ಸ್ಟೇಬಲ್ ದೊಡ್ಡೇಶ್ (40) ಮೃತಪಟ್ಟವರು. ಕಲಬುರಗಿ ನಗರದ ಹೈ ಕೋರ್ಟ್ ಬಳಿ ವಾಸವಿದ್ದ ದೊಡ್ಡೇಶ್, ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಆತ್ಮಹತ್ಯೆಗೆ ಮಾಡಿಕೊಂಡಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ನಗರದ ವಿಶ್ವವಿದ್ಯಾನಿಲಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News