ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಅಂಗವಾಗಿ ನಗರದ ಎಸ್.ಬಿ. ಕನ್ವೆನ್ಷನ್ ಸೆಂಟರ್‌ನಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿಗಳ ಬಳಗದ ವತಿಯಿಂದ ವಿದ್ಯಾರ್ಥಿಗಳು ಹಾಗೂ ಗಿಗ್ ಕಾರ್ಮಿಕರಿಗೆ ಹೆಲ್ಮೆಟ್ ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಯುವಜನರು ಮತ್ತು ಕಾರ್ಮಿಕರಲ್ಲಿ ರಸ್ತೆ ಸುರಕ್ಷತೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜನ್ಮದಿನದ ಸಂಭ್ರಮವನ್ನು ಸಾಮಾಜಿಕ ಸೇವಾ ಕಾರ್ಯದ ಮೂಲಕ ಆಚರಿಸುವ ಮೂಲಕ ಅಭಿಮಾನಿಗಳು ಗಮನ ಸೆಳೆದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಪ್ರಿಯಾಂಕ್ ಖರ್ಗೆ ಅವರು ಯುವಜನರು, ವಿದ್ಯಾರ್ಥಿಗಳು, ಕಾರ್ಮಿಕರು ಸೇರಿದಂತೆ ಸಮಾಜದ ವಿವಿಧ ವರ್ಗಗಳ ಆಶೋತ್ತರಗಳಿಗೆ ಸ್ಪಂದಿಸುತ್ತಾ ಅಭಿವೃದ್ಧಿ ಹಾಗೂ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಕಿರಣ್ ದೇಶಮುಖ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಎಂ.ವೈ. ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಜಿಡಿಎ ಅಧ್ಯಕ್ಷ ಮಜರ್ ಅಲಂ ಖಾನ್, ಐದು ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷೆ ಚಂದ್ರಿಕಾ ಪರಮೇಶ್ವರ, ಯುವ ಕಾಂಗ್ರೆಸ್ ಅಧ್ಯಕ್ಷ ಶಕೀಲ ಸರಡಗಿ, ಕಾಂಗ್ರೆಸ್ ಮುಖಂಡರಾದ ಮಹಾಂತಪ್ಪ ಸಂಗಾವಿ, ರಾಜೀವ್ ಜಾನೆ, ಈರಣ್ಣ ಝಳಕಿ, ಶಿವಾನಂದ ಹೊನಗುಂಟಿ, ಕುಸರೋ ಜಾಗಿರದಾರ, ಸಿದ್ದಾರ್ಥ ಕೋರವಾರ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.

ಪ್ರಿಯಾಂಕ್ ಖರ್ಗೆ ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಜನಸೇವೆಯಲ್ಲಿ ಇನ್ನಷ್ಟು ಯಶಸ್ಸು ದೊರೆಯಲಿ ಎಂದು ಈ ಸಂದರ್ಭದಲ್ಲಿ ಶುಭ ಹಾರೈಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ