×
Ad

ಕಲಬುರಗಿ | ಶಿಕ್ಷಣ ಕ್ಷೇತ್ರಕ್ಕೆ ಪ್ರಿಯಾಂಕ್ ಖರ್ಗೆ ಅವರ ಕೊಡುಗೆ ಅಪಾರ: ಶೇಖ್ ಬಬ್ಲು

Update: 2025-11-24 20:04 IST

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಾಮಾಣಿಕ ಹಾಗೂ ಪ್ರಬುದ್ಧ ರಾಜಕಾರಣಿ ಯಾಗುವುದರ ಜೊತೆಗೆ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶೇಖ್ ಬಬ್ಲು ಹೇಳಿದರು.

ಚಿತ್ತಾಪುರ ಪಟ್ಟಣದ ಬಿಆರ್'ಸಿ ಕಚೇರಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ-ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ 47ನೇ ಜನ್ಮದಿನದ ಪ್ರಯುಕ್ತ ಗೆಳೆಯರ ಬಳಗದ ವತಿಯಿಂದ ಸಂವಿಧಾನ ಓದು ವಿದ್ಯಾರ್ಥಿ ಯುವಜನರಿಗಾಗಿ ಕೈಪಿಡಿ‌ ವಿತರಿಸಿ ಮಾತನಾಡಿದರು.

ಚಿತ್ತಾಪುರ ಮತಕ್ಷೇತ್ರದಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿದ ಪ್ರಿಯಾಂಕ್ ಖರ್ಗೆ ಅವರು ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡುವುದರ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿ ಶೈಕ್ಷಣಿಕ ಕ್ಷೇತ್ರಕ್ಕೆ ಅತೀ ಹೆಚ್ಚು ಅನುದಾನ ಬಿಡುಗಡೆ ಮಾಡಿ ಸೌಲಭ್ಯವನ್ನು ಕಲ್ಪಿಸುತ್ತಿರುವ ರಾಜ್ಯದ ಏಕೈಕ ನಾಯಕರಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.

ಇದೇ ವೆಳೆ 1,000 ಸಂವಿಧಾನ ಓದು ಪುಸ್ತಕಗಳನ್ನು 49 ಸರ್ಕಾರಿ ಪ್ರೌಢ ಶಾಲೆಗಳಿಗೆ, ಸಮಾಜ ಕಲ್ಯಾಣ ಇಲಾಖೆಗೆ 100 ಪುಸ್ತಕಗಳು, ತಾಪಂ ಅಡಿಯಲ್ಲಿ ಬರುವ ಅರಿವು ಕೇಂದ್ರಗಳಿಗೆ 300 ಹಾಗೂ ಅಲ್ಪಸಂಖ್ಯಾತ ಇಲಾಖೆಗೆ 100 ಪುಸ್ತಕಗಳನ್ನು ಉಚಿತವಾಗಿ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಮುಹಮ್ಮದ್‌ ಶರೀಫ್, ರಫೀಕ್ ಲಿಂಕ್, ಎಂ.ಎ ನಯೀಮ್, ಸೀರಾಜ್, ರಾಜು ಸಾಹುಕಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News