×
Ad

ಕಲಬುರಗಿ | ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಪ್ರಗತಿಯಾದಾಗ ಸುಸ್ಥಿರ ಅಭಿವೃದ್ಧಿ ಸಾಧ್ಯ : ಭಂವರ್ ಸಿಂಗ್ ಮೀನಾ

ಜಿಲ್ಲಾ ಮಾನವ ಅಭಿವೃದ್ಧಿ ತಯಾರಿಕೆಗೆ ತರಬೇತಿ ಕಾರ್ಯಾಗಾರ

Update: 2026-01-19 22:55 IST

ಕಲಬುರಗಿ: ಜಿಲ್ಲೆಗಳಲ್ಲಿ ತಲಾ‌ ಆದಾಯ ವೃದ್ಧಿಯಾಗಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಗಮನಾರ್ಹ ಅಭಿವೃದ್ಧಿ ಹೊಂದಿದಲ್ಲಿ ಮಾತ್ರ ರಾಜ್ಯವು ಸುಸ್ಥಿರ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ಅಭಿಪ್ರಾಯಪಟ್ಟರು.

ಸೋಮವಾರ ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಕಚೇರಿಯಿಂದ "ಜಿಲ್ಲಾ ಮಾನವ ಅಭಿವೃದ್ಧಿ ವರದಿ-2025 ಹಾಗೂ ಸಮಗ್ರ ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ-2031 ವರದಿಗಳ ತಯಾರಿಕೆ" ಕುರಿತು ಅಧಿಕಾರಿಗಳಿಗೆ ಆಯೋಜಿಸಿದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾ ಮಾನವ ಅಭಿವೃದ್ಧಿ ತಯಾರಿಕೆಗೆ ಗ್ರಾಮ, ತಾಲೂಕು, ಜಿಲ್ಲಾವಾರು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಆರೋಗ್ಯ, ಜೀವನ ಮಟ್ಟದ ಬಗ್ಗೆ ಅಧಿಕಾರಿಗಳು ಮಾಹಿತಿ‌ ಸಂಗ್ರಹಿಸಬೇಕು. ಅರ್ಥಿಕ ಮತ್ತು ಸಾಮಾಜಿಕ ಸೂಚ್ಯಾಂಕಗಳೇ ಅಭಿವೃದ್ಧಿಯ ನಿಜವಾದ ಮಾಪನಗಳಾಗಿವೆ. ಜಿಲ್ಲೆಯಲ್ಲಿ ಸರ್ಕಾರ ಅಭಿವೃದ್ದಿ ಯೊಜನೆಗಳಿಗೆ ಸಾಕಷ್ಟು ಹಣ ಖರ್ಚು ಮಾಡಿ ಕಾರ್ಯಕ್ರಮಗಳನ್ನು ರೂಪಿಸಿದ್ದು, ಇದರ ಬಳಕೆ ಮತ್ತು ಉತ್ಪಾದಲತೆಯ ಫಲಿತಾಂಶ ತಿಳಿಯಬೇಕಾದಲ್ಲಿ ನಿಖರ ವರದಿ ತಯಾರಿಕೆ ಅತ್ಯವಶ್ಯಕವಾಗಿದೆ ಎಂದರು.

ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಮಾತನಾಡಿ, ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗವು 371(ಜೆ) ವಿಶೇಷ‌ ಮೀಸಲಾತಿ ಹೊಂದಿದೆ. ಜಿಲ್ಲೆ ವಿಶೇಷ ಸಾಮರ್ಥ್ಯ ಮತ್ತು ಸಂಪನ್ಮೂಲ ಹೊಂದಿದ್ದರು ಮಾನವ ಅಭಿವದ್ಧಿ ಸೂಚ್ಯಂಕದಲ್ಲಿ ಕೆಳಗಿರುವುದು ದುರಾದೃಷ್ಠಕರ. ಸರ್ಕಾರಿ ಯೋಜನೆಗಳನ್ನು ಸಮರ್ಪಕ ಅನುಷ್ಠಾನ ಮಾಡುವುದರ ಮೂಲಕ ಜನರ‌ ಜೀವನಮಟ್ಟ ಸುಧಾರಿಸಲು ಅಧಿಕಾರಿಗಳು ಶ್ರಮ ವಹಿಸಬೇಕು ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಅಗಮಿಸಿದ ಗುಲ್ಬರ್ಗಾ ವಿಶ್ವವಿದ್ಯಾಲಯ ನಿವೃತ್ತ ಪ್ರಾಧ್ಯಾಪಕಿ ಡಾ.ಛಾಯಾ ದೇಗಾಂವಕರ್, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಅಸೋಸಿಯೇಟ್ ಪ್ರೊ.ಡಾ.ಬಸವರಾಜ ಎಂ. ಅವರು ಮಾನವ ಅಭಿವೃದ್ಧಿ ವರದಿ ತಯಾರಿಕೆಗೆ ಸಂಬಂಧಿಸಿದಂತೆ‌ ಗಮನಿಸಬೇಕಾದ ಪ್ರಮುಖ ಅಂಶಗಳು ಕುರಿತು ವಿವರಿಸಿದರು.

ಜಿಲ್ಲಾ ಪಂಚಾಯತ್‌ ಮುಖ್ಯ ಯೋಜನಾಧಿಕಾರಿ ಶರಣಯ್ಯ ಎಸ್. ಮಠಪತಿ ಸೇರಿದಂತೆ ತರಬೇತಿಯಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News