×
Ad

ಕಲಬುರಗಿ | ಸಭೆ-ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ನಿಷೇಧ

Update: 2025-02-14 19:21 IST

ಬಿ.ಫೌಜಿಯಾ ತರನ್ನುಮ್

ಕಲಬುರಗಿ : ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಯಾವುದೇ ಅನುದಾನ ಪಡೆಯುವ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸುವ ಸಭೆ-ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ನಲ್ಲಿ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ರಾಜ್ಯ ಸರ್ಕಾರವು ನಿಷೇಧಿಸಿದ್ದು, ಪ್ಲಾಸ್ಟಿಕ್ ಬಳಕೆಯ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡಬೇಕೆಂದು ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ತಿಳಿಸಿದ್ದಾರೆ.

ಸೂಕ್ತ ಸಾಮೂಹಿಕ ಕುಡಿಯುವ ನೀರು ವಿತರಣಾ ಏರ್ಪಡಿಸುವಂತೆ ಸೂಚಿಸಿ ಆದೇಶಗಳನ್ನು ಹೊರಡಿಸಿದ್ದರೂ ಸಹ ಈ ನಿಯಮವನ್ನು ಪಾಲಿಸದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಜ.31, 2025 ರಂದು ಸುತ್ತೋಲೆ ಹೊರಡಿಸಿ, ಸಭೆ-ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ (Single Use Packaged water bottles) ನೀರಿನ ಬಳಕೆ/ಸರಬರಾಜು ಮಾಡುವುದನ್ನು ನಿಷೇಧಿಸಿದ್ದು, ಇಂತಹ ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭಾನುಸಾರ ಶುಚಿತ್ವ ರೀತಿಯಲ್ಲಿ ಗ್ಲಾಸ್, ಸ್ಟೀಲ್, ಪೇಪರ್ ಮತ್ತಿತರ ಪ್ಲಾಸ್ಟಿಕ್ ಅಲ್ಲದ ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮವಹಿಸುವಂತೆ ಅಧಿಸೂಚನೆ, ಆದೇಶ ಹಾಗೂ ಸುತ್ತೋಲೆ ಹೊರಡಿಸಲಾಗಿದೆ.

ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದ್ದು, ಇದನ್ನು ತಡೆಯುವ ದೃಷ್ಟಿಯಿಂದ ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಏಕ ಕಾಲಿಕ ಪ್ಲಾಸ್ಟಿಕ್ ನೀರಿನ ಬಳಕೆ/ಸರಬರಾಜು ಮಾಡುವುದನ್ನು ತಡೆಯಲು ಹಾಗೂ ಪ್ಲಾಸ್ಟಿಕ್ ಬಳಕೆಯ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡಬೇಕೆಂದು ಅವರು ತಿಳಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News