ಕಲಬುರಗಿ | ಸಿಜೆಐ ಬಿ.ಆರ್.ಗವಾಯಿ ಮೇಲೆ ಶೂ ಎಸೆತ ಖಂಡಿಸಿ ಜಿಲ್ಲಾ ನಾಗರಿಕ ಹೋರಾಟ ಸಮಿತಿಯಿಂದ ಪ್ರತಿಭಟನೆ
ಕಲಬುರಗಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಾದ ಬಿಆರ್ ಗವಾಯಿ ಅವರತ್ತ ಶೂ ಎಸೆದಿರುವ ವಕೀಲ ರಾಕೇಶ್ ಕಿಶೋರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ಜಿಲ್ಲಾ ನಾಗರಿಕ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಯಿತು. ಬಳಿಕ ರಾಷ್ಟ್ರಪತಿಗಳಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಪತ್ರ ಸಲ್ಲಿಸಲಾಯಿತು.
ತಿಮ್ಮಪುರಿ ಸರ್ಕಲ್ ನಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಸಮಿತಿಯ ಮುಖಂಡರು, ಶೂ ಎಸೆದಿರುವ ವಕೀಲನಿಗೆ ಉಗ್ರ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದರು.
ಸಿಜೆಐ ಅವರತ್ತ ಶೂ ಎಸೆದು ಅವಮಾನ ಮಾಡಿರುವುದು ದೇಶದ ಪ್ರತಿಯೊಬ್ಬ ನಾಗರಿಕರಿಗೆ ಅತ್ಯಂತ ನೋವಿನ ಸಂಗತಿಯಾಗಿದೆ. ತಾನೊಬ್ಬ ವಕೀಲನೆಂಬ ಪ್ರಜ್ಞೆಯನ್ನು ಕಳೆದುಕೊಂಡು ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವಂತಹ ಕೆಲಸ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಅವ್ವಣ್ಣಾ ಮ್ಯಾಕೇರಿ, ಶರಣಪ್ಪ ತಳವಾರ, ಧರ್ಮಣ್ಣ ಇಟಗಾ, ರಾಜು ವಾಡೇಕರ್, ಅಂಬಾರಾಯ ಅಷ್ಟಗಿ, ಸಂತೋಷ್ ಹಾದಿಮನಿ, ಬಸವರಾಜ ಮದ್ರಿಕಿ, ಮಹೇಂದ್ರ, ಸೇರಿದಂತೆ ಮತ್ತಿತರರು ಇದ್ದರು.