×
Ad

ಕಲಬುರಗಿ | ರಟಕಲ್ ಗ್ರಾಮ ಪಂಚಾಯತ್‌ ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

Update: 2025-05-06 20:43 IST

ಕಲಬುರಗಿ: ಎರಡು ವರ್ಷಗಳಿಂದ ರಟಕಲ್ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮನೆ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡದೇ ವಿಳಂಬ ಧೋರಣೆ ಅನುಸರಿಸುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ, ಮನೆ ಕಟ್ಟಡ ನಿರ್ಮಾಣಕ್ಕೆ ತಕ್ಷಣ ಅನುಮತಿ ನೀಡುವಂತೆ ಆಗ್ರಹಿಸಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ರಟಕಲ್ ಗ್ರಾಮದ ನಿವಾಸಿ ಮಸ್ತಾನ್ ಸಾಬ್ ಎನ್ನುವರು 2023ರಲ್ಲಿ ಮನೆ ನಿರ್ಮಾಣಕ್ಕಾಗಿ ಗ್ರಾಮ ಪಂಚಾಯತಿಗೆ ನಿಯಮಾನುಸಾರ ಅರ್ಜಿ ಸಲ್ಲಿಸಿದ್ದಾರೆ. ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಪಿಡಿಓ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿದೆ ನೋಡೋಣ ನೋಡೋಣ ಎಂದು ಹೇಳುತ್ತಾರೆ ಎಂದು ಆರೋಪಿಸಿದರು.

ಪಂಚಾಯಿತಿ ಕಚೇರಿಗೆ ಸಮಸ್ಯೆ ಎಂದು ಅರ್ಜಿ ಕೊಡಲು ಬಂದವರಿಗೆ ಸ್ವೀಕೃತಿ ಪ್ರತಿ ನೀಡಲ್ಲ. ಪಿಡಿಓ ಅಧಿಕಾರಿ ಹೇಳಿದ್ದಾಗ ಮಾತ್ರ ಸ್ವೀಕೃತಿ ಪ್ರತಿ ನೀಡುವ ವ್ಯವಸ್ಥೆ ಇಲ್ಲಿ ಜಾರಿಗೆ ತಂದು ಅಧಿಕಾರವನ್ನು ದುರುಪಯೋಗ ಪಡೆಸಿಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮ ಪಂಚಾಯತ್‌ ವ್ಯವಸ್ಥೆಗೆ ಚುತಿ ತರುವ ಮೂಲಕ ಕರ್ತವ್ಯ ಲೋಪ ಎಸಗುತ್ತಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ತಕ್ಷಣ ಮನೆ ನಿರ್ಮಾಣಕ್ಕೆ ಅನುಮತಿ ನೀಡಬೇಕೆಂದು ಗ್ರಾಮ ಪಂಚಾಯತ್‌ ಗೋಡೆಗೆ ಸಾಂಕೇತಿಕ ಪ್ರತಿಭಟನಾ ಬ್ಯಾನರ್ ಹಾಕಿ ಹಿರಿಯ ಅಧಿಕಾರಿಗಳಿಗೆ ಆಗ್ರಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News