ಕಲಬುರಗಿ: ಸಚಿವ ಹಾಗೂ ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಅವರ ಮತಕ್ಷೇತ್ರದ ನರಿಬೋಳ ಹಾಗೂ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರ ಮತಕ್ಷೇತ್ರದ ಚಾಮನೂರು ಗ್ರಾಮಗಳ ನಡುವಿನ ಅಪೂರ್ಣ ಸೇತುವೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಬುಧವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.

ಅಪೂರ್ಣ ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಕಾಮಗಾರಿ ಪರಿಶೀಲಿಸದೆ ಗುತ್ತಿಗೆದಾರರಿಗೆ ಬಿಲ್ ಪಾವತಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಅಮಾನತುಗೊಳಿಸಬೇಕು. ಕಾಮಗಾರಿ ನಡೆಸಿದ ಕೆಎಂವಿ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಿ, ಈ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಹೋರಾಟಗಾರರು ಆಗ್ರಹಿಸಿದರು.

ಧರಣಿಗೆ ಕಲ್ಯಾಣ ಕರ್ನಾಟಕ ಸೇನೆ ಬೆಂಬಲ ವ್ಯಕ್ತಪಡಿಸಿದ್ದು, ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಅಧ್ಯಕ್ಷ ಎಂ.ಎಸ್. ಪಾಟೀಲ ನರಿಬೋಳ, ಕಲ್ಯಾಣ ಕರ್ನಾಟಕ ಸೇನೆ ಅಧ್ಯಕ್ಷ ದತ್ತು ಹಯ್ಯಾಳಕರ್, ಬಹುಜನ ಸಮಾಜ ಪಾರ್ಟಿ ರಾಜ್ಯ ಕಾರ್ಯದರ್ಶಿ ಹುಚ್ಚೇಶ್ವರ ವಠಾರ, ಹೋರಾಟಗಾರರಾದ ಗುರಣ್ಣ ಹೈನಾಪುರ, ವಿನೋದಕುಮಾರ ಜನವರಿ, ನ್ಯಾಯವಾದಿ ಭಗವಾನ್ ಎ. ಬೋವಿ, ಬಾಪುಗೌಡ ಯರಗಲ್, ಹಣಮಂತ ಕಾಖಂಡಗಿ, ಶರಣು ನೌಲೆಕರ್, ಆನಂದ ಹೊನಗುಂಟಿ, ಬಜರಂಗ್ ಸಿಂಗ್, ರೋಹಿತ್ ಪಾಟೀಲ, ಮಲ್ಲಿಕಾರ್ಜುನ ಸರಡಗಿ ಹಾಗೂ ಶಿವಚಲಪ್ಪ ಬಗಾಹಳ್ಳಿ ಸೇರಿದಂತೆ ಹಲವರು ಧರಣಿಯಲ್ಲಿ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor