×
Ad

ಕಲಬುರಗಿ: ದಲಿತ ಮುಖಂಡರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

Update: 2025-12-03 20:31 IST

ಕಲಬುರಗಿ: ಸುರಪುರದ ದಲಿತ ಹಿರಿಯ ಮುಖಂಡ ಮಾನಪ್ಪ ಕಟ್ಟಿಮನಿ ಅವರ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಆರೋಪಿಗಳ ವಿರುದ್ಧ ಕ್ರಮ ಸೂಕ್ತ ಕೈಗೊಳ್ಳಬೇಕೆಂದು ಜೇವರ್ಗಿ ತಾಲೂಕು ದಲಿತ ಸಂಘಟನೆಗಳ ಸಮನ್ವಯ ಸಮಿತಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿತು.

ಜೇವರ್ಗಿ ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಸುರಪುರದ ದಲಿತ ಹಿರಿಯ ಮುಖಂಡ ಮಾನಪ್ಪ ಕಟ್ಟಿಮನಿ ಅವರನ್ನು ಕೆಲವರು ಸಾರ್ವಜನಿಕ ಸ್ಥಳದಲ್ಲಿ ಎಳೆದಾಡಿ ಹಲ್ಲೆ ಮಾಡುವುದಲ್ಲದೇ ಜೀವ ಬೆದರಿಕೆ ಹಾಕಿರುವುದು ಖಂಡನೀಯ. ದಲಿತ ಮುಖಂಡರನ್ನ ಈ ರಿತಿಯಾಗಿ ಜೀವ ಬೆದರಿಕೆ ಹಾಕುವುದು ಅವರ ಮೇಲೆ ಹಲ್ಲೆ ಮಾಡುವುದರಿಂದ ಅವರ ನೀಚ ಮನಸ್ಥಿತಿ ಕಾಣಿಸುತ್ತದೆ. ಅವರು ನಮ್ಮ ಸಮಾಜದ ಹಿರಿಯರನ್ನು ಅವಮಾನಿಸಿ ಹಲ್ಲೆ ಮಾಡಿರುವುದು ಇಡೀ ಸಮುದಾಯಕ್ಕೆ ಮಾಡಿದ ಅನ್ಯಾಯ. ಕೂಡಲೇ ಈ ಕೃತ್ಯ ಎಸಗಿದ ಶಾಸಕರ ಬೆಂಬಲಿಗರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಚಂದ್ರಶೇಖರ ಹರನಾಳ, ಭೀಮರಾಯ ನಗನೂರ, ಶಾಂತಪ್ಪ ಯಲಗೋಡ, ಮಲ್ಲಣ್ಣ ಕೊಡಚಿ, ಭಾಗಣ್ಣ ಸಿದ್ನಾಳ ಸೇರಿದಂತೆ ಹಲವರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News