ಕಲಬುರಗಿ | ಕೇಂದ್ರ ಬಸ್ ನಿಲ್ದಾಣದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ
Update: 2025-12-21 23:24 IST
ಕಲಬುರಗಿ: ಕಲಬುರಗಿ ಕೇಂದ್ರ ಬಸ್ ನಿಲ್ದಾಣದಲ್ಲಿನ ರೋಟರಿ ಕ್ಲಬ್ ಹಾಗೂ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ರವಿವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಕಲಬುರಗಿ ರೋಟರಿ ಕ್ಲಬ್ ಟ್ರೈನರ್ ಹಾಗೂ ಉಪಾಧ್ಯಕ್ಷರಾದ ಡಾ.ಎ.ಎಸ್.ಭದ್ರಶೆಟ್ಟಿ ರವರು ಮಕ್ಕಳಿಗೆ ಪೋಲಿಯೋ ಲಸಿಕೆ ಹನಿ ಹಾಕುವ ಮೂಲಕ ಅಭಿಯಾನದ ಮೊದಲನೆ ದಿನದ ಲಸಿಕಾಕರಣಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮೇಲ್ವಿಚಾರಕ ಸಂತೋಷ ಮುಳಗೆ ಹಾಗೂ ನರ್ಸಿಂಗ್ ವಿದ್ಯಾರ್ಥಿನಿಯರು ಹಾಜರಿದ್ದರು.
ಈ ವೇಳೆ ಡಿ.ಎಚ್.ಓ ಡಾ.ಶರಣಬಸಪ್ಪ ಕ್ಯಾತನಾಳ, ಆರ್.ಸಿ.ಎಚ್.ಓ ಡಾ.ಸಿದ್ದು ಪಾಟೀಲ್, ತಾಲೂಕು ಆರೋಗ್ಯಾಧಿಕಾರಿ ಡಾ.ಮಾರುತಿ ಕಾಂಬ್ಳೆ ಅವರು ಭೇಟಿ ನೀಡಿ ಲಸಿಕಾಕರಣ ಕಾರ್ಯ ಪರಿಶೀಲಿಸಿದರು. ನಮ್ಮ ಕ್ಲಿನಿಕ್ ವೈದ್ಯಾಧಿಕಾರಿ ಡಾ.ಭಾಗ್ಯಶ್ರೀ ಬಿರಾದಾರ, ಸಿಬ್ಬಂದಿಗಳಾದ ಸಂಜನಾ ಜಾಧವ, ಮಂಜುಳಾ ಜಮಾದಾರ ಮತ್ತು ನರ್ಸಿಂಗ್ ವಿದ್ಯಾರ್ಥಿನಿಯರು ಹಾಜರಿದ್ದರು.