ಕಲಬುರಗಿ: ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಗುಲ್ಬರ್ಗಾ ವಿವಿ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು
Update: 2025-07-31 13:00 IST
ಕಲಬುರಗಿ: ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದಡಿಯಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯದ ಸಿಬ್ಬಂದಿಯೋರ್ವನ ವಿರುದ್ಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜುಲೈ 29 ರಂದು ಮಧ್ಯಾಹ್ನ 12.30ಕ್ಕೆ ನಡೆದಿದ್ದ ಪದವಿ(ಬಿಎ, ಬಿ.ಕಾಂ, ಬಿಬಿಎಂ) ಪರೀಕ್ಷೆಗೂ ಮುನ್ನವೇ ವಿವಿಯ ಸಿಬ್ಬಂದಿಯೋರ್ವ ಪ್ರಶ್ನೆ ಪತ್ರಿಕೆಗಳನ್ನು ಲೀಕ್ ಮಾಡಿದ್ದಾರೆ. ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜನತಾ ಪರಿವಾರ ಸಂಘಟನೆ ಅಧ್ಯಕ್ಷ ಸಿರಾಜ್ ಶಾಬ್ದಿ ದೂರು ನೀಡಿದ್ದರು. ಅವರ ದೂರಿನ ಮೇರೆಗೆ ಬ್ರಹ್ಮಪುರ ಠಾಣೆಯ ಪೊಲೀಸರು ಬುಧವಾರ ವಿವಿಯ ಅನಾಮಿಕ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಕುರಿತಾಗಿ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ.130/2025 ಕಲಂ 318(4), 316 (2), 324(2), ಸಂಗಡ 3(5), ಬಿ. ಎನ್. ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.