×
Ad

ಕಲಬುರಗಿ | ವೃದ್ಧೆಯ ಅತ್ಯಾಚಾರ ಪ್ರಕರಣ : ಆರೋಪಿ ಬಂಧನ

Update: 2024-11-29 22:06 IST

ಕಲಬುರಗಿ : ಚಿಂಚೋಳಿ ತಾಲ್ಲೂಕಿನ ಗ್ರಾಮವೊಂದರ 80 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ನಡೆಸಿ ಬೆಳ್ಳಿ ಚೈನ್ ಹಾಗೂ ಮೊಬೈಲ್ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಚಿಂಚೋಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಚಿಂಚೋಳಿ ತಾಲ್ಲೂಕಿನ ಐನೋಳ್ಳಿ ಗ್ರಾಮದ ತಯ್ಯಬ್ ಮಿರನಶಹಾ ಫಕೀರ ಎಂಬಾತನನ್ನು ಪೊಲೀಸರು ಶುಕ್ರವಾರ ಹೈದರಾಬಾದ್‌ನಲ್ಲಿ ವಶಕ್ಕೆ ಪಡೆದಿದ್ದಾರೆ. ಬಳಿಕ ಆತನ ಆರೋಗ್ಯ ತಪಾಸಣೆ ನಡೆಸಿದ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ತಿಳಿದುಬಂದಿದೆ.

ಆರೋಪಿಯ ಬಳಿ ಮೊಬೈಲ್, ಆಧಾರ ಕಾರ್ಡ್ ಮತ್ತು ಗುರುತಿನ ಚೀಟಿ ಇಲ್ಲ ಎಂದು ಗೊತ್ತಾಗಿದೆ. ಊರೂರು ಅಲೆಯುತ್ತ ಸಿಕ್ಕಸಿಕ್ಕ ಕೆಲಸ ಮಾಡುತ್ತ ತಿರುಗಾಡುತ್ತಿದ್ದ. ಆರೋಪಿ ಚಿಂಚೋಳಿಯ ಗೊಟ್ಟಮಗೊಟ್ಟ ಜಾತ್ರೆಗೆ ಬಂದು ಅಲ್ಲಿನ ಸಮೀಪದ ಗ್ರಾಮದಲ್ಲಿ ನ.18ರಂದು ವೃದ್ಧೆಯ ಮೇಲೆ ಅತ್ಯಾಚಾರ ನಡೆಸಿ, ಆಕೆಯ ಬಳಿಯಿದ್ದ ವಸ್ತುಗಳನ್ನು ದೋಚಿ ಪರಾರಿಯಾಗಿದ್ದ ಎನ್ನಲಾಗಿದೆ.

ಈತನ ಬಂಧನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಬಹುಮಾನ ಘೋಷಣೆ ಮಾಡಿದ್ದರು. ಆರೋಪಿಯನ್ನು ಪತ್ತೆ ಹಚ್ಚಲು ಚಿಂಚೋಳಿ ಡಿವೈಎಸ್ಪಿ ಸಂಗಮನಾಥ ಹಿರೇಮಠ ಮಾರ್ಗದರ್ಶನದಲ್ಲಿ ಸಿಪಿಐ ಕಪಿಲದೇವ, ಎಸ್ಐ ಗಂಗಮ್ಮ ಜಿನಕೇರಿ, ಮಡಿವಾಳಪ್ಪ ಬಾಗೋಡಿ, ವೆಂಕಟೇಶ ನಾಯಕ ನೇತೃತ್ವದಲ್ಲಿ 4 ತಂಡಗಳನ್ನು ರಚಿಸಲಾಗಿತ್ತು. ಈ ಕುರಿತು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News