ಕಲಬುರಗಿ: ಶಿಕ್ಷಕರ ದಿನಾಚರಣೆಯ ಅಂಗವಾಗಿ ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಷನ್ ವತಿಯಿಂದ ಖ್ಯಾತ ಮೂಳೆ ಶಸ್ತ್ರಚಿಕಿತ್ಸಕ, ಪ್ರಾಧ್ಯಾಪಕ ಹಾಗೂ ಶಿಕ್ಷಣತಜ್ಞ ಡಾ. ಸಚಿನ್ ಅವಿನಾಶ್ ಶಹಾ ಅವರಿಗೆ ಪ್ರತಿಷ್ಠಿತ ‘ವಿದ್ಯಾರತ್ನ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಯಿತು.

ಸೆಪ್ಟೆಂಬರ್ 5ರಂದು ಕೊಡಗಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ, ಮಾರ್ಗದರ್ಶನ ಹಾಗೂ ಮೂಳೆ ಶಸ್ತ್ರಚಿಕಿತ್ಸೆ ಕ್ಷೇತ್ರಕ್ಕೆ ಸಲ್ಲಿಸಿರುವ ವಿಶಿಷ್ಟ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಯಿತು.

ವೈದ್ಯ, ಸಂಶೋಧಕ ಮತ್ತು ಶಿಕ್ಷಣತಜ್ಞರಾಗಿ ಡಾ. ಸಚಿನ್ ಶಹಾ ಅವರು ಆಘಾತ ಚಿಕಿತ್ಸಾ ವಿಭಾಗ ಹಾಗೂ ಮೂಳೆ ಶಸ್ತ್ರಚಿಕಿತ್ಸೆಗೆ ಸಂಬಂಧಿಸಿದ ಹಲವು ಸಂಶೋಧನಾ ಲೇಖನಗಳನ್ನು ಪ್ರಕಟಿಸುವ ಮೂಲಕ ವೈದ್ಯಕೀಯ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆ ನೀಡಿದ್ದಾರೆ. ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮಗಳು, ಕಾರ್ಯಾಗಾರಗಳು ಮತ್ತು ಅತಿಥಿ ಉಪನ್ಯಾಸಗಳ ಮೂಲಕ ಯುವ ವೈದ್ಯರಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.

ಅಸ್ಥಿಸಂಧಿವಾತ, ಆರೋಗ್ಯಕರ ವೃದ್ಧಾಪ್ಯ ಹಾಗೂ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವ ಕೆಲಸದಲ್ಲಿಯೂ ಅವರು ಸಕ್ರಿಯರಾಗಿದ್ದಾರೆ. ಜ್ಞಾನವನ್ನು ವಿದ್ಯಾರ್ಥಿಗಳಿಗೆ ಹಂಚಿ ಉತ್ತಮ ವೃತ್ತಿಪರರನ್ನು ರೂಪಿಸುವ ಅವರ ಸಮರ್ಪಣೆ ಅನೇಕ ಯುವ ಶಸ್ತ್ರಚಿಕಿತ್ಸಕರಿಗೆ ಸ್ಫೂರ್ತಿಯಾಗಿದೆ ಎಂದು ಸಂಘದ ಪದಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಷನ್ ಅಧ್ಯಕ್ಷ ಡಾ. ಬಿ. ಸಚ್ಚಿದಾನಂದ ರಾಯ್, ಡಾ. ಭಾರತ್ ರಾಜು ಜಿ., ಡಾ. ಹರೀಶ್ ಮೂರ್ತಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor