×
Ad

ಕಲಬುರಗಿ | ಏ. 3ರಿಂದ ಬೆಂಗಳೂರಿನಲ್ಲಿ ನಿವೃತ್ತ ನೌಕರರ ಅನಿರ್ದಿಷ್ಟಾವಧಿ ಧರಣಿ

Update: 2025-03-29 16:53 IST

ಕಲಬುರಗಿ : 2022ರ ಜುಲೈನಿಂದ 2024ರ ಜುಲೈ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ 7ನೇ ವೇತನ ಆಯೋಗದ ಅನುಸಾರ ಆರ್ಥಿಕ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿ ಏ.3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ನಿವೃತ್ತ ನೌಕರರ ವೇದಿಕೆ ಜಿಲ್ಲಾ ಪ್ರಧಾನ ಸಂಚಾಲಕ ಗುರಣ್ಣಾ ಎಸ್.ಅವಂಟಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, 2022ರ ಜುಲೈನಿಂದ ನಿವೃತ್ತರಾದ 26,700 ಅಧಿಕಾರಿ-ನೌಕರ ವರ್ಗದವರಿಗೆ ಆಗಿರುವ ಆರ್ಥಿಕ ನಷ್ಟದ ಕುರಿತು ಸತತವಾಗಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು ಮತ್ತು ಶಾಸಕರಿಗೆ ಮನವಿ ಸಲ್ಲಿಸುತ್ತಾ ಬರಲಾಗಿದೆ. ಆದರೆ, ಇನ್ನೂವರೆಗೆ ನಮ್ಮ ಬೇಡಿಕೆಗೆ ಸ್ಪಂದಿಸುತ್ತಿಲ್ಲ. ಇದರಿಂದ ಕರ್ನಾಟಕ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ ಹೆಗ್ಡೆ ಅವರ ಬೆಂಬಲದೊಂದಿಗೆ ಧರಣಿ ಹಮ್ಮಿಕೊಳ್ಳಲಾಗಿದ್ದು, ಅಂದಿನ ಧರಣಿಗೆ ಅಣ್ಣಾ ಹಜಾರೆ ಸಹ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಭರತರಾಜ ಸಾವಳಗಿ ಮಾತನಾಡಿದರು.

ಸುದ್ದಿಗೋಷ್ಠಿಯಲ್ಲಿ ನೀಲಕಂಠಯ್ಯ ಹಿರೇಮಠ, ಮಲಕಪ್ಪ ಅಂಕಲಗಿ, ಶಿವಶರಣಪ್ಪ ಹೊಸಮನಿ, ಮಲ್ಲಿಕಾರ್ಜುನ ಚೆಟ್ನಳ್ಳಿ, ಡಿ.ಬಿ.ಪಾಟೀಲ, ತುಂಗಾ ಮತ್ತಿತರರು ಇತರರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News