ಕಲಬುರಗಿ: 2026-27ನೇ ಸಾಲಿಗೆ ಚಿತ್ತಾಪುರ ಮತ್ತು ಆಳಂದ ಉಪ ನೋಂದಣಿ ಕಚೇರಿ ವ್ಯಾಪ್ತಿಯಲ್ಲಿನ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲು ನಿರ್ಧರಿಸಲಾಗಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಮತ್ತು ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.

ಚಿತ್ತಾಪುರದಲ್ಲಿ ಪರಿಷ್ಕೃತ ಮಾರ್ಗಸೂಚಿ ದರಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಪ್ರಕಟಣೆ ಹೊರಡಿಸಿದ ದಿನಾಂಕದಿಂದ 20 ದಿನಗಳೊಳಗಾಗಿ ಪ್ರಜಾಸೌಧದ ನೆಲಮಹಡಿಯ ಕೊಠಡಿ ಸಂಖ್ಯೆ 1ರಲ್ಲಿರುವ ಉಪ ನೋಂದಣಾಧಿಕಾರಿಗಳ ಕಚೇರಿಗೆ ಲಿಖಿತವಾಗಿ ಸಲ್ಲಿಸಬೇಕು ಎಂದು ಉಪ ನೋಂದಣಾಧಿಕಾರಿಗಳು ತಿಳಿಸಿದ್ದಾರೆ.

ಅದೇ ರೀತಿ, ಆಳಂದ ತಾಲೂಕಿನಲ್ಲಿ ನ.6ರಂದು ನಡೆದ ಸಮಿತಿ ಸಭೆಯಲ್ಲಿ 2026-27ನೇ ಸಾಲಿನ ಸ್ಥಿರಾಸ್ತಿ ಮಾರ್ಗಸೂಚಿ ದರ ಪರಿಷ್ಕರಣೆಗೆ ಅನುಮೋದನೆ ನೀಡಲಾಗಿದೆ. ಈ ಕುರಿತು ಸಾರ್ವಜನಿಕರು ತಮ್ಮ ಸಲಹೆ ಮತ್ತು ಆಕ್ಷೇಪಣೆಗಳನ್ನು ಪ್ರಕಟಣೆ ಹೊರಡಿಸಿದ ದಿನಾಂಕದಿಂದ 20 ದಿನಗಳೊಳಗಾಗಿ ಆಳಂದ ಉಪ ನೋಂದಣಾಧಿಕಾರಿಗಳ ಕಚೇರಿಗೆ ಲಿಖಿತವಾಗಿ ಸಲ್ಲಿಸಬೇಕು ಎಂದು ಪ್ರಕ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor