×
Ad

ಕಲಬುರಗಿ: ಕಾಂತಾ ಕಾಲೋನಿಯಲ್ಲಿ 15 ರೂ. ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ

Update: 2026-06-04 23:57 IST

ಕಲಬುರಗಿ: ನಗರದ ವಾರ್ಡ್ ನಂ. 43ರ ವ್ಯಾಪ್ತಿಯ ಕಾಂತಾ ಕಾಲೋನಿಯಲ್ಲಿ 15ನೇ ಹಣಕಾಸು ಯೋಜನೆಯ ಉಳಿತಾಯ ಅನುದಾನದಲ್ಲಿ 15 ರೂ. ಲಕ್ಷ ವೆಚ್ಚದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಮಹಾಪೌರರಾದ ವರ್ಷಾ ರಾಜೀವ ಜಾನೆ ಅವರು ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ನಗರದ ವಿವಿಧ ವಾರ್ಡ್‌ಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಮಹಾನಗರ ಪಾಲಿಕೆ ಆದ್ಯತೆ ನೀಡುತ್ತಿದ್ದು, ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಜನರಿಗೆ ಅಗತ್ಯವಿರುವ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಸಾರ್ವಜನಿಕರ ಬೇಡಿಕೆಗಳಿಗೆ ಸ್ಪಂದಿಸಿ ಅಭಿವೃದ್ಧಿ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುತ್ತಿದ್ದು, ನಗರದ ಸಮಗ್ರ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಲಾಗುತ್ತಿದೆ ಎಂದು ಹೇಳಿದರು.

ಕಾಂತಾ ಕಾಲೋನಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಯಿಂದ ಸ್ಥಳೀಯ ನಿವಾಸಿಗಳಿಗೆ ಅನುಕೂಲವಾಗಲಿದ್ದು, ಸಂಚಾರ ವ್ಯವಸ್ಥೆ ಸುಧಾರಣೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಗುತ್ತಿಗೆದಾರರಾದ ಕುಮಾರಸ್ವಾಮಿ ಹಿರೇಮಠ, ನಾಗೇಶ ಮಠಪತಿ, ಶಿವಕುಮಾರ್ ಪಾಂಚಾಳ, ಆಕಾಶ ಚೌಹಾಣ್ ಉದನೂರ, ಪರಶುರಾಮ್ ಸೇರಿದಂತೆ ಸ್ಥಳೀಯ ಮುಖಂಡರು, ಸಾರ್ವಜನಿಕರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News