ಕಲಬುರಗಿ| ತಾಲೂಕು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಸಂದೀಪ್ ಆಯ್ಕೆ
ಕಲಬುರಗಿ: ಜಿಲ್ಲಾ ಘಟಕದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರ ನಿರ್ದೇಶನದ ಮೇರೆಗೆ ಕಲಬುರಗಿ ತಾಲೂಕು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘವನ್ನು ರಚಿಸಲಾಗಿದ್ದು, ತಾಲೂಕು ಅಧ್ಯಕ್ಷರಾಗಿ ಸಂದೀಪ್ ಜಿಂದೆ ಹಾಗೂ ಉಪಾಧ್ಯಕ್ಷರಾಗಿ ಭಾರತಿ ಆಯ್ಕೆಯಾಗಿದ್ದಾರೆ.
ಸಂಘದ ಗೌರವ ಅಧ್ಯಕ್ಷರಾಗಿ ರಮೇಶ್ ರಾಜಾಪುರ, ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್, ಸಂಘಟನಾ ಕಾರ್ಯದರ್ಶಿಯಾಗಿ ಬಂಡೆಪ್ಪ ದನ್ನಿ ಹಾಗೂ ಖಜಾಂಚಿಯಾಗಿ ವಾಸಿಮುದ್ದೀನ್ ಮಣೂರ ಆಯ್ಕೆಯಾಗಿದ್ದಾರೆ.
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸುವರ್ಣ, ವನಜಾಕ್ಷಿ, ಮಹಾದೇವ ದ್ಯಾಮ, ಗಾಯತ್ರಿ ಹಾಗೂ ಮಲ್ಲೇಶಪ್ಪ ಗೌಡ ಆಯ್ಕೆಯಾಗಿದ್ದಾರೆ.
ನೂತನವಾಗಿ ಆಯ್ಕೆಯಾದ ಎಲ್ಲ ಪದಾಧಿಕಾರಿಗಳಿಗೆ ಜಿಲ್ಲಾ ಸಂಘದ ವತಿಯಿಂದ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು.