ಕಲಬುರಗಿ | ಜ.26ರಂದು ಸಂಗೊಳ್ಳಿ ರಾಯಣ್ಣ ಪುಣ್ಯತಿಥಿ : ಶಿವಲಿಂಗಪ್ಪ
ಕಲಬುರಗಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುಣ್ಯತಿಥಿ ಹಾಗೂ ಅವರ ರಾಜ್ಯಾಭಿಷೇಕದ ವಾರ್ಷಿಕೋತ್ಸವ ಜ.26ರಂದು ನಂದಗಡ ಗ್ರಾಮದಲ್ಲಿ ಆಯೋಜಿಸಲಾಗಿದೆ ಎಂದು ರಾಷ್ಟ್ರೀಯ ಸಮಾಜ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಶಿವಲಿಂಗಪ್ಪ ಕಿನ್ನೂರ ತಿಳಿಸಿದ್ದಾರೆ.
ರಾಷ್ಟ್ರೀಯ ಸಮಾಜ ಪಕ್ಷದ ಕರ್ನಾಟಕ ಘಟಕ ಹಾಗೂ ರಾಷ್ಟ್ರೀಯ ಕಾರ್ಯಕಾರಿ ಮಂಡಳಿಯ ಸಹಯೋಗದಲ್ಲಿ ನಡೆಯಲಿರುವ ಈ ಕಾರ್ಯಕ್ರಮ ಖಾನಾಪುರ ತಾಲೂಕಿನ ನಂದಗಡದ ಸಂಗೊಳ್ಳಿ ರಾಯಣ್ಣ ಸ್ಮಾರಕದಲ್ಲಿ ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದೆ.
ರಾಷ್ಟ್ರೀಯ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಸಚಿವ ಮಹದೇವ್ ಜಾನ್ಕರ್ ಮುಖ್ಯಅತಿಥಿಯಾಗಿ ಆಗಮಿಸಲಿದ್ದಾರೆ. ಪಕ್ಷದ ಹಿಂದಿನ ರಾಷ್ಟ್ರೀಯ ಅಧ್ಯಕ್ಷ ಸಿದ್ದಪ್ಪ ಅಕ್ಕಿ ಸಾಗರ್ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದೇ ವೇಳೆ ಸಂಗೊಳ್ಳಿ ರಾಯಣ್ಣ ಸಮಾಧಿ ಸ್ಥಳವನ್ನು ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಬೇಕು ಎಂಬ ಬೇಡಿಕೆ ಸರಕಾರದ ಮುಂದಿಡಲಾಗುವುದು ಎಂದು ಶಿವಲಿಂಗಪ್ಪ ತಿಳಿಸಿದರು. ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.