×
Ad

ಕಲಬುರಗಿ | ಫೆ.15 ರಂದು ಸಂತ ಸೇವಾಲಾಲ ಜಯಂತಿ ಆಚರಣೆಗೆ ನಿರ್ಧಾರ

Update: 2026-01-30 18:18 IST

ಕಲಬುರಗಿ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರೀ ಸಂತ ಸೇವಾಲಾಲ ಜಯಂತಿಯನ್ನು ಫೆ.15 ರಂದು ವಿಜೃಂಭಣೆಯಿಂದ ಆಚರಿಸಲು ಅಪರ ಜಿಲ್ಲಾಧಿಕಾರಿಗಳಾದ ರಾಯಪ್ಪ ಹುಣಸಗಿ ಅವರ ಅಧ್ಯಕ್ಷತೆಯಲ್ಲಿ ನಿರ್ಧರಿಸಲಾಯಿತು.

ಇತ್ತೀಚಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇದೇ ಫೆ.15 ರಂದು ರವಿವಾರ ಮಧ್ಯಾಹ್ನ 2 ಗಂಟೆಗೆ ಕಲಬುರಗಿ ನಗರದ ಡಾ.ಎಸ್.ಎಂ ಪಂಡಿತ ರಂಗಮಂದಿರದಲ್ಲಿ ಶ್ರೀ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮ ಜರುಗಲಿದ್ದು, ಈ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಸೂಚಿಸಿದರು.

ಅಂದು ಬೆಳಿಗ್ಗೆ 9 ಗಂಟೆಗೆ ಕಡ್ಡಾಯವಾಗಿ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಮಟ್ಟದ ಸರ್ಕಾರಿ ಕಚೇರಿಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಜಯಂತಿ ಆಚರಿಸಬೇಕು. ಸಭೆಯಲ್ಲಿ ನುರಿತ ಉಪನ್ಯಾಸಕರನ್ನು ಸಹ ಆಹ್ವಾನಿಸಬೇಕು ಎಂದು ಹೇಳಿದರು.

ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದರ ಜೊತೆಗೆ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಯಂತಿ ಸಮಿತಿ ಅಧ್ಯಕ್ಷರಾಗಿ ರೇವುನಾಯಕ್ ಬೆಳಮಗಿ, ಉಪನ್ಯಾಸಕರಾಗಿ ಡಾ.ಗಣಪತಿ ರಾಠೋಡ ಹಾಗೂ ವಿನೋದ್ ಎಲ್ ಚವ್ಹಾಣ ಕಾರ್ಯಕ್ರಮದ ನಿರೂಪಕರನ್ನಾಗಿ ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ಜಗದೀಶ್ವರಿ ನಾಶಿ ಅವರು ಪ್ರೋಟೋಕಾಲ್ ಪ್ರಕಾರ ಕಾರ್ಯಕ್ರಮ ಪತ್ರಿಕಾ ಆಮಂತ್ರಣ ಮುದ್ರಿಸಲಾಗುವುದು. ನಾಡಗೀತೆ, ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದರು.

ವೇದಿಕೆ ಮೇಲೆ ಜಿಲ್ಲಾಧಿಕಾರಿ ಕಚೇರಿಯ ಚುನಾವಣೆ ಶಾಖೆ ತಹಶೀಲ್ದಾರರಾದ ಪಂಪಯ್ಯ ಸೇರಿದಂತೆ ಸಮಾಜದ ಮುಖಂಡರಾದ ವಿಜಯಕುಮಾರ್ ರಾಠೋಡ್, ರಮೇಶ್ ಬಿ. ಚವ್ಹಾಣ್, ಲಲಿತಾಬಾಯಿ ಆರ್, ರೇಣುಕಾ ರಾಠೋಡ್, ಪ್ರಶಾಂತ್ ರಾಠೋಡ್, ಭೀಮಸಿಂಗ್ ರಾಠೋಡ್, ನಾರಾಯಣ್ ದಿವಾಕರ್ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News