Kalaburagi | ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಿಜೆಪಿ ಯುವ ಮೋರ್ಚಾದಿಂದ ಸಸಿ ನೆಡುವ ಕಾರ್ಯಕ್ರಮ
ಕಲಬುರಗಿ : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಯುವ ಮೋರ್ಚಾ ಮಹಾನಗರ ಜಿಲ್ಲಾ ಘಟಕದ ವತಿಯಿಂದ ನಗರದ ರೋಟರಿ ಕ್ಲಬ್ ಶಾಲಾ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹೇಶ್ ಚವ್ಹಾಣ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮಕ್ಕೆ ಬಿಜೆಪಿ ಜಿಲ್ಲಾ ಅಧ್ಯಕ್ಷ ಚಂದು ಪಾಟೀಲ ಚಾಲನೆ ನೀಡಿದರು. ಪರಿಸರ ಸಂರಕ್ಷಣೆ ಹಾಗೂ ಹಸಿರು ವಾತಾವರಣ ನಿರ್ಮಾಣದ ಮಹತ್ವವನ್ನು ಪ್ರತಿಪಾದಿಸಿ ವಿವಿಧ ಜಾತಿಯ ಸಸಿಗಳನ್ನು ನೆಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಅಶೋಕ್ ಬಗಲಿ, ಶಾಸಕ ಅವಿನಾಶ ಜಾಧವ, ಅವನ್ನ ಮೇಕೆರಿ, ಶರಣಪ್ಪ ತಳವಾರ, ಉಮೇಶ್ ಪಾಟೀಲ್, ಮಹಾದೇವ ಬೆಳಮಗಿ, ಶಿವಯೋಗಿ ನಾಗನಹಳ್ಳಿ, ಲಿಂಗರಾಜ ಬಿರಾದಾರ, ಶಂಭುಲಿಂಗ ಬಳಬಟ್ಟಿ, ಶರಣು ಸಜ್ಜನ, ಶಿವಲಿಂಗ ಪಾಟೀಲ್ (ಸಂಚಾಲಕರು), ಸೌರಭ ರಂಗದಳ (ಸಹ-ಸಂಚಾಲಕರು), ಚನ್ನಬಸಪ್ಪ ಭಂಗೆ, ಶರಣು ಲೆಂಗಟಿ, ಮಹೇಶ್ ಹರ್ವಾಲ, ಸಚಿನ್ ಬನ್ನಿ, ಗಂಗಾಧರ, ಅಮಿತ್ ಕುಲಕರ್ಣಿ, ಮಲ್ಲಿಕಾರ್ಜುನ ಕೊಂಡೆದ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಹೆಚ್ಚು ಹೆಚ್ಚು ಮರಗಳನ್ನು ಬೆಳೆಸುವ ಮೂಲಕ ಹಸಿರು ಪರಿಸರ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಮುಖಂಡರು ಕರೆ ನೀಡಿದರು.