×
Ad

ಕಲಬುರಗಿ | ಎಸ್‌ಡಿಟಿಯು ಜಿಲ್ಲಾ ಘಟಕದ ಪದಾಧಿಕಾರಿಗಳ ನೇಮಕ : ಸ್ಮಾರ್ಟ್ ಕಾರ್ಡ್ ವಿತರಣೆ

Update: 2026-02-02 23:56 IST

ಕಲಬುರಗಿ: ನಗರದ ಹಬೀಬ್ ಫಂಕ್ಷನ್ ಹಾಲ್‌ನಲ್ಲಿ ರವಿವಾರ ನಡೆದ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (SDTU) ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕ ಮತ್ತು ಸದಸ್ಯರಿಗೆ ಸ್ಮಾರ್ಟ್ ಕಾರ್ಡ್‌ಗಳು ವಿತರಣೆ ಮಾಡಲಾಯಿತು.

ನೂತನ ಅಧ್ಯಕ್ಷರಾಗಿ ಸೈಯದ್ ಜಾಕಿರ್ ಅವರನ್ನು ನೇಮಕ ಮಾಡಲಾಗಿದ್ದು, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸಲೀಂ ಮುಲ್ಲಾ, ಜಿಲ್ಲಾ ಉಪಾಧ್ಯಕ್ಷರಾಗಿ ಎಂ.ಡಿ. ಖಾಜಾ ಅವರನ್ನು ನೇಮಕ ಮಾಡಲಾಯಿತು. ಈ ವೇಳೆ ಹಿಂದಿನ ಜಿಲ್ಲಾ ಅಧ್ಯಕ್ಷರಾದ ಸೈಯದ್ ಅಲ್ತಾಫ್, ಪ್ರಧಾನ ಕಾರ್ಯದರ್ಶಿಯಾದ ಇಮ್ತಿಯಾಜ್ ಖಾನ್ ಸೇರಿದಂತೆ ಅನೇಕ ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಸಂಘವು ಸದಾ ಬದ್ಧವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬಲಿಷ್ಠವಾಗಿ ಕಾರ್ಯನಿರ್ವಹಿಸುವುದಾಗಿ ನೂತನ ಅಧ್ಯಕ್ಷ ಸೈಯದ್ ಜಾಕಿರ್ ಕರೆ ನೀಡಿದರು. ಸಂಘಟನೆಯ ಬಲವರ್ಧನೆ, ಕಾರ್ಮಿಕರ ಹಕ್ಕುಗಳ ರಕ್ಷಣೆ ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಎಂ.ಡಿ.ಖಾಜಾ ಸಾಹೇಬ್, ಪ್ರಧಾನ ಕಾರ್ಯದರ್ಶಿ ಜನಾಬ್ ಸಲೀಮ್ ಮುಲ್ಲಾ ಸಾಹೇಬ್, ಜಾಯಿಂಟ್ ಕಾರ್ಯದರ್ಶಿ ಅಬ್ದುಲ್ ರಹೀಮ್, ಕಾರ್ಯದರ್ಶಿ ಸೈಯದ್ ಕಲೀಂ ಹಾಗೂ ಖಜಾಂಚಿ ಮುಹಮ್ಮದ್ ಅಝರುದ್ದೀನ್, ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ SDTU ರಾಜ್ಯ ಸಮಿತಿಯ ಸದಸ್ಯರಾದ ಅಬ್ದುಲ್ ರಹೀಮ್ ಪಟೇಲ್, ಮುಹಮ್ಮದ್ ಮೊಹ್ಸಿನ್, ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಮೆಹಬೂಬ್, ವಕೀಲ ಮೊಹ್ತೆಶಮ್ ಪಟೇಲ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News