Kalaburagi | ಕಬ್ಬಿಣದ ರಾಡ್‌ನಿಂದ ಹೊಡೆದು ಸೆಕ್ಯುರಿಟಿ ಗಾರ್ಡ್ ಹತ್ಯೆ
Update: 2026-05-17 11:33 IST
ಕಲಬುರಗಿ : ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಸೆಕ್ಯುರಿಟಿ ಗಾರ್ಡ್ ಒಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರವಿವಾರ ನಗರದ ರಾಮ ಮಂದಿರದ ಬಳಿ ನಡೆದಿದೆ.
ನಗರದ ರಾಣೇಶಪಿರ್ ದರ್ಗಾ ಸಮೀಪದ ನಿವಾಸಿ ರವಿಚಂದ್ರ ಖೇಡ್ (45) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಅವರು ರಾಮ ಮಂದಿರದ ಸಮೀಪ ಇರುವ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‌ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.