ಕಲಬುರಗಿ | ಸೇಡಂ ಸಿಮೆಂಟ್ ಕಾರ್ಖಾನೆಯ ಕಾರ್ಮಿಕ ಮೃತ್ಯು
Update: 2025-02-18 22:46 IST
ಕಲಬುರಗಿ : ಸೇಡಂ ತಾಲೂಕಿನ ಕೊಡ್ಲಾ ಗ್ರಾಮದ ಬಳಿ ಇರುವ ಶ್ರೀ ಸಿಮೆಂಟ್ ಕಂಪನಿಯಲ್ಲಿ ಬಿಹಾರ ಮೂಲದ ಕಾರ್ಮಿಕ ಓರ್ವ ಲೋ ಬಿಪಿಯಾಗಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಬಿಹಾರ ಮೂಲದ ಚಂದನಸಿಂಗ್ (34) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಗುತ್ತಿಗೆದಾರನ ಮೂಲಕ ಸಿಮೆಂಟ್ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ ಕಾರ್ಮಿಕ ನಾಲ್ಕು ದಿನಗಳಿಂದ ಕೆಲಸಕ್ಕೆ ಬಾರದೆ ಕಂಪನಿಯ ಹೊರಗಡೆ ಇರುವ ಮನೆಯಲ್ಲಿದ್ದ, ಸೋಮವಾರ ಮನೆಯಿಂದ ಶೌಚಾಲಯಕ್ಕೆ ತೆರಳಿದ ವೇಳೆ ಲೋ ಬಿಪಿಯಾಗಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಶ್ರೀ ಸಿಮೆಂಟ್ ಕಂಪನಿ ಆಡಳಿತ ಮಂಡಳಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.