×
Ad

ಕಲಬುರಗಿ | ಹಿರಿಯ ಪತ್ರಕರ್ತ ಪ್ರಭುಲಿಂಗ ನೀಲೂರೆ ಆತ್ಮಹತ್ಯೆ

Update: 2026-01-31 19:14 IST

ಕಲಬುರಗಿ : ಕಲಬುರಗಿ ನಗರದ ಹೊರವಲಯದ ಅಷ್ಟಗಾ ಗ್ರಾಮದ ಸಮೀಪ ಮರಕ್ಕೆ ನೇಣು ಹಾಕಿಕೊಂಡು ಪತ್ರಕರ್ತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಮೃತರನ್ನು ಆಳಂದ ತಾಲೂಕಿನ ಹಳ್ಳಿಸಲಗರ ಗ್ರಾಮದ ಮೂಲ ನಿವಾಸಿ, ಸದ್ಯ ಕಲಬುರಗಿ ನಗರದ ಬಸ್ ಡಿಪೊ–2ರ ಸಮೀಪ ವಾಸಿಸುತ್ತಿದ್ದ ಹಿರಿಯ ಪತ್ರಕರ್ತ ಪ್ರಭುಲಿಂಗ ನೀಲೂರೆ (52) ಎಂದು ಗುರುತಿಸಲಾಗಿದೆ.

ಪ್ರಭುಲಿಂಗ ನೀಲೂರೆ ಅವರು ವಿಜಯ ಕರ್ನಾಟಕ ಪತ್ರಿಕೆಯ ಕಲಬುರಗಿ ಸ್ಥಾನಿಕ ಕಚೇರಿಯಲ್ಲಿ ಮುಖ್ಯ ಉಪಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಪತ್ರಿಕೋದ್ಯಮದ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲೂ ಅಪಾರ ಆಸಕ್ತಿ ಹೊಂದಿದ್ದ ಅವರು, ಅನೇಕ ಕೃತಿಗಳನ್ನು ರಚಿಸಿ ಹೆಸರು ಗಳಿಸಿದ್ದರು. ಎರಡು ವರ್ಷಗಳ ಹಿಂದೆ ನಡೆದಿದ್ದ ಆಳಂದ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಇತ್ತೀಚೆಗಷ್ಟೇ ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದರು.

ಮೃತರು ಡೆತ್ ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೃತ ಪತ್ರಕರ್ತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಪ್ರಭುಲಿಂಗ ನೀಲೂರೆ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ಹಿರಿಯ ಪತ್ರಕರ್ತರು, ಸಾಹಿತಿಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News