Kalaburagi |ಪತ್ರಕರ್ತ ಅಜೀಜುಲ್ಲಾ ಸರ್ಮಸ್ತ್‌ ಅವರಿಗೆ ಸೇವಾ ಪುರಸ್ಕಾರ

Update: 2026-08-10 19:08 IST

ಕಲಬುರಗಿ: ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಕನ್ನಡ ಭವನದಲ್ಲಿ ನಾಲ್ಕನೇ ದಾಸ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಸಮಾಜಕ್ಕೆ ಗಣನೀಯ ಸೇವೆ ಸಲ್ಲಿಸಿದ ಎಂಟು ಸಾಧಕರಿಗೆ ಸೇವಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಈ ವೇಳೆ ಹಿರಿಯ ಪತ್ರಕರ್ತ ಅಜೀಜುಲ್ಲಾ ಸರ್ಮಸ್ತ್ ಅವರಿಗೆ ಅವರ ಸುದೀರ್ಘ ಪತ್ರಿಕೋದ್ಯಮ ಸೇವೆಯನ್ನು ಗುರುತಿಸಿ ಸೇವಾ ಪುರಸ್ಕಾರ ಪ್ರದಾನ ಮಾಡಲಾಯಿತು.

ಸಮ್ಮೇಳನದ ಅಧ್ಯಕ್ಷ, ಹಿರಿಯ ಸಾಹಿತಿ ಡಾ. ಸುರೇಶ್ ಎಲ್. ಜಾಧವ್ ಹಾಗೂ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರು ಅಜೀಜುಲ್ಲಾ ಸರ್ಮಸ್ತ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News