×
Ad

ಕಲಬುರಗಿ | ಗುಲ್ಬರ್ಗಾ ವಿವಿಯಲ್ಲಿನ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಎಸ್‌ಎಫ್‌ಐ ಆಗ್ರಹ

Update: 2025-07-15 18:37 IST

ಕಲಬುರಗಿ: ಇಲ್ಲಿನ ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಶೈಕ್ಷಣಿಕ ಸಮಸ್ಯೆಗಳು ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದಾರೆ. ಕೂಡಲೇ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಜಿಲ್ಲಾ ಸಮಿತಿ ಪ್ರತಿಭಟನೆ ನಡೆಸಿ, ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.

ಯುಯುಸಿಎಂಎಸ್ ಪದ್ಧತಿ ರದ್ದುಪಡಿಸಬೇಕು, ಸಂಶೋಧನಾ ವಿದ್ಯಾರ್ಥಿಗಳಿಗೆ ಸಹಾಯಧನವನ್ನು ಸಮಯಕ್ಕೆ ಸರಿಯಾಗಿ ಬಿಡುಗಡೆ ಮಾಡಬೇಕು, ಆಡಳಿತದಲ್ಲಿ ಪಾರದರ್ಶಕತೆ ತರಬೇಕು ಎಂದು ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದರು.

ವಿಶ್ವವಿದ್ಯಾಲಯದಲ್ಲಿ ಅಂಕಪಟ್ಟಿ, ಫಲಿತಾಂಶ ಹಾಗೂ ದಾಖಲೆಗಳಲ್ಲಿ ವಿಳಂಬ ಮತ್ತು ದೋಷಗಳು ಹೆಚ್ಚಾಗಿವೆ. ವಸತಿ ನಿಲಯಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿದೆ. ಭ್ರಷ್ಟಾಚಾರದ ಆರೋಪಗಳು ಹರಿದಾಡುತ್ತಿರುವುದು ಜ್ಞಾನ ದೇಗುಲಕ್ಕೆ ಕಳಂಕ ತಂದಿದೆ. ಇಂತವುಗಳನ್ನು ಮತ್ತೆ ಮರು ಕಳಿಸದಂತೆ ನೋಡಬೇಕು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿಎಸ್.ಎಫ್.ಐ ಜಿಲ್ಲಾ ಅಧ್ಯಕ್ಷ ಸರ್ವೇಶ್, ಜಿಲ್ಲಾ ಕಾರ್ಯದರ್ಶಿ ಸುಜಾತಾ ವೈ, ಉಪಾಧ್ಯಕ್ಷ ಪ್ರೇಮ್, ಸಹಕಾರ್ಯದರ್ಶಿ ನಾಗಮ್ಮ, ಭರತ್, ಜಿಲ್ಲಾ ಸಮಿತಿ ಸದಸ್ಯರು ಕಿರಣ್ ಮತ್ತು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News