×
Ad

ಕಲಬುರಗಿ | ಸೆ.14ರಂದು ಷಡಾಕ್ಷರಿ, ಸಂಗಾಗೆ ಸ್ವರ್ಣ ಸಿರಿ ಪ್ರಶಸ್ತಿ ಪ್ರದಾನ: ತೇಗಲತಿಪ್ಪಿ

Update: 2025-09-12 18:47 IST

ಷಡಕ್ಷರಿ, ರಮೇಶ್ ಸಂಗಾ

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕೊಡಮಾಡುವ `ಸ್ವರ್ಣ ಸಿರಿ’ ಪ್ರಶಸ್ತಿ ಪ್ರದಾನ ಸಮಾರಂಭ ಇದೇ ಸೆ.14 ರ ಬೆಳಗ್ಗೆ 9.45 ಕ್ಕೆ ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಸಮಾಜಮುಖಿ ಕಾರ್ಯಗಳ ಮೂಲಕ ಸಮಾಜ ಸೇವೆಯಲ್ಲಿ ನಿರಂತರ ತೊಡಗಿಸಿಕೊಂಡಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹಾಗೂ ಕರ್ನಾಟಕ ಸರ್ಕಾರದ ಸಚಿವಾಲಯದ ಅಧಿಕಾರಿಗಳು ಹಾಗೂ ನೌಕರರ ಸಂಘದ ಅಧ್ಯಕ್ಷ ರಮೇಶ ಸಂಗಾ ಇರ್ವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಸಮಾಜದಲ್ಲಿ ವ್ಯಕ್ತಿ ಹಲವಾರು ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗಳನ್ನು ಮಾಡಿದಾಗ ಅಂತಹವರನ್ನು ಗುರುತಿಸಿ ಗೌರವಿಸುವ ಕೆಲಸ ಪರಿಷತ್ತು ಜಿಲ್ಲೆಯಲ್ಲಿ ಮಾಡುತ್ತಿದೆ ಎಂದು ವಿವರಿಸಿದರು.

ಕನಕಶ್ರೀ ಪ್ರಶಸ್ತಿ ಪುರಸ್ಕೃತರೂ ಆದ ಹಿರಿಯ ಸಾಹಿತಿ ಡಾ.ಸ್ವಾಮಿರಾವ ಕುಲಕರ್ಣಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳೂಂಡಗಿ, ಸಂಘದ ರಾಜ್ಯ ಪರಿಷತ್ ಸದಸ್ಯ ಧರ್ಮರಾಜ ಜವಳಿ, ಕೇಂದ್ರ ಕಸಾಪ ಪ್ರತಿನಿಧಿ ಸೈಯ್ಯದ್ ನಜಿರುದ್ದಿನ್ ಮುತ್ತವಲ್ಲಿ ಅವರುಗಳು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News