×
Ad

ಕಲಬುರಗಿ | ಕಾಯಕ ಪರಂಪರೆಗೆ ಶಕ್ತಿ ನೀಡಿದ ಶರಣ ನುಲಿಯ ಚಂದಯ್ಯ: ರಾಣಪ್ಪ ಸಂಗನ್

Update: 2025-08-09 20:02 IST

ಕಲಬುರಗಿ: ಕಾಯಕವೇ ಶ್ರೇಷ್ಠವೆಂದು ಕಾಯಕ ಪರಂಪರೆಗೆ ಶಕ್ತಿ ನೀಡಿದ ಶ್ರೀ ನುಲಿಯ ಚಂದಯ್ಯರ ವಚನಗಳನ್ನು ಪ್ರತಿ ಮನೆ ಮನೆಗೆ ತಲುಪಿಸುವ ಕಾರ್ಯ ಆಗಬೇಕಿದೆ ಎಂದು ಭಂಕೂರ ಸರಕಾರಿ ಪ್ರೌಢಶಾಲೆಯ ಪ್ರಭಾರಿ ಮುಖ್ಯಗುರು ರಾಣಪ್ಪ ಸಂಗನ್ ಹೇಳಿದರು.

ಅವರು ಶನಿವಾರ ಭಂಕೂರ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಶರಣ ಶ್ರೀ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಶರಣ ಶ್ರೀ ನುಲಿಯ ಚಂದಯ್ಯ ಅವರು 48ಕ್ಕೂ ಹೆಚ್ಚು ವಚನ ನೀಡಿದ ಚೇತನರು. ಇವರ ಚಿಂತನೆಗಳು ಸಮಾಜದಲ್ಲಿ ಮುಂದೆ ಸಾಗಬೇಕು. ಎಲ್ಲ ಸಮುದಾಯ ಒಟ್ಟಾಗಿ ಸೇರಿ ನುಲಿಯ ಶ್ರೀ ನುಲಿಯ ಚಂದಯ್ಯನವರ ಜಯಂತಿ ಆಚರಣೆ ಮಾಡುವ ಮೂಲಕ ಅವರ ಯೋಚನೆ ಮುನ್ನಡೆಸಬೇಕು. ಹುಟ್ಟಿನಿಂದಲೂ ಹಗ್ಗ ಮಾಡುವ ಕೆಲಸ ಮಾಡುತ್ತಿದ ಅವರು ಶೂನ್ಯ ಸಂಪಾದನೆಯಲ್ಲಿ ಕಾಯಕ ಯೋಗ ಮುನ್ನಡೆಸಿದರು. ಇವರ ಸಾಧನೆ ನಮ್ಮೆಲ್ಲರಿಗೆ ಮಾದರಿಯಾಗಿದ್ದು, ಅವರ ವಚನಗಳನ್ನು ಪ್ರತಿ ಮನೆಗೂ ತಲುಪಿಸುವ ಕಾರ್ಯ ಆಗಬೇಕಿದೆ ಎಂದರು.

ಶಿಕ್ಷಕ ದತ್ತಪ್ಪ ಕೋಟನೂರ ಮಾತನಾಡಿದರು.

ಶಿಕ್ಷಕರಾದ ವಿಷ್ಣುತೀರ್ಥ ಆಲೂರ, ಶಾಂತಮಲ್ಲ ಶಿವಭೋ, ಸೀತಮ್ಮ.ಎನ್, ವಿಮಲಾ ಕಾಂಬಳೆ, ಅನೀಲಕುಮಾರ ಇತರರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News