×
Ad

Kalaburagi | ಸಿಎಂಎ ಫೌಂಡೇಶನ್ ಪರೀಕ್ಷೆಯಲ್ಲಿ ಶರಣಬಸವೇಶ್ವರ ಕಾಲೇಜು ವಿದ್ಯಾರ್ಥಿಗಳ ಸಾಧನೆ

Update: 2026-07-09 20:24 IST

ಕಲಬುರಗಿ : ಭಾರತದ ವೆಚ್ಚ ಮತ್ತು ನಿರ್ವಹಣಾ ಲೆಕ್ಕ ಪರಿಶೋಧಕರ ಸಂಸ್ಥೆ (ICMAI), ದೆಹಲಿ ನಡೆಸಿದ ಜೂನ್–2026ರ ಸಿಎಂಎ ಫೌಂಡೇಶನ್ ಪರೀಕ್ಷೆಯಲ್ಲಿ ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ಬಿ.ಕಾಂ. ದ್ವಿತೀಯ ಸೆಮಿಸ್ಟರ್ ವಿದ್ಯಾರ್ಥಿಗಳಾದ ವೀರೇಶ ಎಂ.ಎನ್., ಸುಮಿತ್ ಚವ್ಹಾಣ ಹಾಗೂ ಋಷಿಕೇಶ ಪುಕಾಳೆ ಮೊದಲ ಪ್ರಯತ್ನದಲ್ಲೇ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಯನ್ನು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಪೂಜ್ಯ ಮಾತೋಶ್ರೀ ಡಾ. ದಾಕ್ಷಾಯಿಣಿ ಎಸ್. ಅಪ್ಪ, ಸಂಸ್ಥೆಯ 9ನೇ ಪೀಠಾಧಿಪತಿ ಪೂಜ್ಯ ದೊಡ್ಡಪ್ಪ ಎಸ್. ಅಪ್ಪ ಹಾಗೂ ಕಾರ್ಯದರ್ಶಿ ಬಸವರಾಜ ದೇಶಮುಖ ಅಭಿನಂದಿಸಿ, ಮುಂದಿನ ಶೈಕ್ಷಣಿಕ ಜೀವನಕ್ಕೂ ಶುಭ ಹಾರೈಸಿದ್ದಾರೆ.

ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ದಶರಥ ಮೇತ್ರೆ, ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ದಯಾನಂದ ಹೊಡಲ್, ನ್ಯಾಕ್ ಸಂಯೋಜಕರಾದ ಡಾ.ಸುನಂದಾ ವಾಂಜರಖೇಡೆ, ಪ್ರೊ.ಸೀನಾ ನಾಯಕ್ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News