Kalaburagi | ಜು.29 ರಂದು ಶಿವಶರಣ ಹಡಪದ ಅಪ್ಪಣ್ಣ ಜಯಂತಿ

Update: 2026-07-23 17:22 IST

ಕಲಬುರಗಿ: ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಇವುಗಳ ಸಂಯುಕ್ತಾಶ್ರಯದಲ್ಲಿ ಜು.29 ರಂದು ಬುಧವಾರ ಮಧ್ಯಾಹ್ನ 12 ಗಂಟೆಗೆ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆ ಕಾರ್ಯಕ್ರಮವನ್ನು ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ್‌ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ವಹಿಸುವರು. ಚಿತ್ತಾಪುರ ಕಂಬಳೇಶ್ವರ ಸಂಸ್ಥಾನ ಮಠದ ಷ.ಬ್ರ. ಶ್ರೀ ಸೋಮಶೇಖರ ಶಿವಾಚಾರ್ಯರು ದಿವ್ಯ ಸಾನಿಧ್ಯವಹಿಸುವರು. ರಾಜ್ಯದ ಗೃಹ, ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ, ಇ-ಆಡಳಿತ ಇಲಾಖೆಯ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಮುದಗಲ್ ಕಲ್ಯಾಣ ಆಶ್ರಮದ ಶ್ರೀ ಮಾಂತೇಶ್ವರ ಮಠದ ಶ್ರೀ ಮಹಾಂತ ಸ್ವಾಮಿಗಳು ವಿಶೇಷ ಉಪನ್ಯಾಸ ನೀಡುವರು.

ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ.ಶರಣಪ್ರಕಾಶ್ಶ‌ ಪಾಟೀಲ್‌, ಆಳಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್. ಪಾಟೀಲ್‌, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಜ್ ಫಾತೀಮಾ, ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯಸಿಂಗ್ ಅವರು ಗೌರವ ಉಪಸ್ಥಿತಿವಹಿಸುವರು. ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ್‌ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ಆರ್. ದೊಡ್ಡಮನಿ, ಬೀದರ್‌ ಲೋಕಸಭಾ ಸದಸ್ಯ ಸಾಗರ್‌ ಖಂಡ್ರೆ, ಶಾಸಕರುಗಳಾದ ಎಂ.ವೈ. ಪಾಟೀಲ್‌, ಬಸವರಾಜ ಮತ್ತಿಮಡು, ಡಾ.ಅವಿನಾಶ ಜಾಧವ್‌, ವಿಧಾನ ಪರಿಷತ್ ಶಾಸಕರುಗಳಾದ ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ತಿಮ್ಮಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವಿಂದ್ರಪ್ಪ ಮರತೂರ, ಕರ್ನಾಟಕ ರಾಜ್ಯ ವಕ್ಪ್ ಮಂಡಳಿಯ ಅಧ್ಯಕ್ಷ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ, ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಬ್ದುಲ್ ರಶೀದ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ್ ಎಂ.ವೈ. ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಕರ್ನಾಟಕ ರಾಜ್ಯ ದ್ವಿದಳಧಾನ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸೈಯ್ಯದ್ ಮಹೆಮೂದ್ ಚಿಸ್ತಿ ಸಾಹೇಬ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ್, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್ ಹಾಗೂ ಮಹಾನಗರಪಾಲಿಕೆ ಮಹಾಪೌರ ವರ್ಷಾ ರಾಜೀವ ಜಾನೆ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಶಾಂತನು ಸಿನ್ಹಾ, ಕಲಬುರಗಿ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ನಲಿನ್ ಅತುಲ್, ಕಲಬುರಗಿ ಕೆ.ಕೆ.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕಿ ಡಾ. ಬಿ. ಸುಶೀಲಾ, ಶಹಾಬಾದ ಶರಣ ಹಡಪದ ಅಪ್ಪಣ್ಣ ದೇವಸ್ಥಾನದ ಶ್ರೀ ಬಾಲ ಬ್ರಹ್ಮಚಾರಿ ರಾಜ ಶಿವಯೋಗಿಗಳು ಹಾಗೂ ಕಲಬುರಗಿ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾ ಅಧ್ಯಕ್ಷರಾದ ಈರಣ್ಣ ಸಿ. ಹಡಪದ ಸಣ್ಣೂರ್ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News