ಕಲಬುರಗಿ | ಶ್ರಾವಕ ಸಿದ್ದರಾಮ ನಡಗೇರಿಗೆ ಪ್ರತಿಭಾ ಪುರಸ್ಕಾರ
ಕಲಬುರಗಿ: ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು, ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ಜರುಗಿದ್ದ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಎಸೆಸೆಲ್ಸಿ ಯಲ್ಲಿ ಶೇ.90.56 ಅಂಕಪಡೆದ ಕಲಬುರಗಿಯ ಶರಣ ಸಿರಸಗಿ ಡಾ.ಬಿ.ಆರ್.ಅಂಬೇಡ್ಕರ್ ನಗರದ ಶ್ರಾವಕ ತಂದೆ ಸಿದ್ದರಾಮ ನಡಗೇರಿ ಅವರಿಗೆ ಪ್ರತಿಪುರಸ್ಕಾರ ಪ್ರದಾನ ಮಾಡಿ ಸನ್ಮಾನಿಸಲಾಯಿತು.
ಸಾಲೂರು ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ಕೆ.ವೆಂಕಟೇಶ ಕಾರ್ಯಕ್ರಮ ಉದ್ಘಾಟಿಸಿದ್ದರು. ಪಶು ಸಂಗೋಪನೆ, ರೇಷ್ಮೆ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರು ಪ್ರಾಸ್ತಾವಿಕ ಮಾತನಾಡಿದರು.
ಈ ಸಂದರ್ಭದಲ್ಲಿ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್. ಶಾಸಕ ಎಮ್.ಆರ್.ಮಂಜುನಾಥ ಹನೂರ. ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ರಾಜ್ಯಾದ್ಯಕ್ಷ ಶಿವಾನಂದ ತಗಡೂರು, ಸೇರಿದಂತೆ ರಾಜ್ಯ ಪದಾಧಿಕಾರಿಗಳು ಜಿಲ್ಲಾ ತಾಲ್ಲೂಕು ಪದಾಧಿಕಾರಿಗಳು ಮತ್ತು ಅಧಿಕಾರಿ ವರ್ಗದವರು ಹಾಜರಿದ್ದರು.