ಕಲಬುರಗಿ | ಸರಕಾರಿ ಶಾಲೆಗಳನ್ನು ಮುಚ್ಚುತ್ತಿರುವುದನ್ನು ವಿರೋಧಿಸಿ ಸಹಿ ಅಭಿಯಾನ
ಕಲಬುರಗಿ : ರಾಜ್ಯದಲ್ಲಿ 6 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದನ್ನು ವಿರೋಧಿಸಿ 50 ಲಕ್ಷ ಸಹಿ ಸಂಗ್ರಹ ಅಭಿಯಾನ ಹಿನ್ನೆಲೆಯಲ್ಲಿ ರವಿವಾರ ಶಹಾಬಾದ್ ನಗರದ ಮಜೀದ್ ಚೌಕ್ ಮುಂಭಾಗದಲ್ಲಿ ಸಾರ್ವಜನಿಕರಿಂದ ಸಹಿ ಸಂಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ ಉಪಾಧ್ಯಕ್ಷೆ ಪ್ರೀತಿ ದೊಡ್ಡಮನಿ ಮಾತನಾಡಿ, ರಾಜ್ಯದಲ್ಲಿ ಒಟ್ಟು 23,436 ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ 10 ಕಡಿಮೆ ದಾಖಲಾತಿರುವ 6,000 ಶಾಲೆಗಳಿವೆ, 7,821 ಏಕೋಪಾಧ್ಯಾಯ ಶಾಲೆಗಳಿವೆ. 3,500ಕ್ಕೂ ಹೆಚ್ಚು ಶಾಲೆಗಳಲ್ಲಿ ಬಳಕೆಗೆ ಯೋಗ್ಯ ಶೌಚಾಲಯ ವ್ಯವಸ್ಥೆ ಇಲ್ಲ ಹಲವು ಶಾಲೆಗಳ ಕಟ್ಟಡಗಳು ವರ್ಷಗಳಿಂದ ದುರಸ್ತಿ ಕಾಣದೆ ಚಾವಣೆಗಳು ಸೋರುತ್ತಿವೆ ಎಲ್ಲದಕ್ಕಿಂತ ಮುಖ್ಯವಾಗಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 59 ಸಾವಿರಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದರು.
ಎಐಡಿವೈಓ ಶಹಾಬಾದ ಕಾರ್ಯದರ್ಶಿ ರಮೇಶ್ ದೇವಕರ್ ಮಾತನಾಡಿದರು.
ಜಿಲ್ಲಾ ಸಮಿತಿ ಸದಸ್ಯರಾದ ಅಜಯ್ ಗುರುಜಲ್ಕರ್, ಸ್ಪೂರ್ತಿ ಗುರುಜಲ್ಕರ್, ಬೃಂದಾ ಬಿಂದು, ಚೇತನ, ಸೃಷ್ಟಿ, ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದರು.