×
Ad

ಕಲಬುರಗಿ| ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಎಸ್‌ಐಒ ಪ್ರತಿಭಟನೆ

Update: 2026-05-19 19:00 IST

ಕಲಬುರಗಿ: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್‌ಐಒ) ಕಲಬುರಗಿ ಘಟಕದ ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆ ಹಾಗೂ ವಿಶ್ವಾಸಾರ್ಹತೆಗೆ ಧಕ್ಕೆಯುಂಟುಮಾಡಿರುವ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಹಾಗೂ ಘಟನೆಗೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಸಂಘಟನೆಯ ಮುಖಂಡರು, ನೀಟ್‌ನಂತಹ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಸಂಭವಿಸುವುದು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ನಂಬಿಕೆ ಉಳಿಯಬೇಕಾದರೆ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮುಬಶೀರ್, ಅಬ್ದುರ್ ರೆಹಮಾನ್, ನಾಸಿರ್, ಅಹ್ಮರ್, ಮುಬೀನ್ ಅಹ್ಮದ್, ಸಕ್ರಾನ್, ಸಬೀರ್, ಶುಜಾ, ಅಫ್ನಾನ್, ಅತಾ, ಶಬಾಜ್, ಶೇಕ್ ಜುನೈದ್ ಹಾಗೂ ತಹಾನ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News