ಕಲಬುರಗಿ: ನಗರದ ಕುಸನೂರ ಗ್ರಾಮದಲ್ಲಿ ಉಪ್ಪಾರ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ಸಮುದಾಯ ಭವನ ನಿರ್ಮಾಣದ ಕನಸು ನನಸಾಗುವ ಹಂತ ತಲುಪಿದೆ.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅನುಮೋದನೆಗೊಂಡ ಖಾಸಗಿ ಬಡಾವಣೆಯ ನಾಗರಿಕ ಸೌಲಭ್ಯ (ಸಿ.ಎ.) ನಿವೇಶನವನ್ನು ಉಪ್ಪಾರ ಸಂಘಕ್ಕೆ ಹಂಚಿಕೆ ಮಾಡುವ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೃಹ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಕುಸನೂರ ಗ್ರಾಮದ ಸರ್ವೆ ನಂ. 19/2ಬಿ ಯಲ್ಲಿರುವ ಪಿಎಲ್-01 ಸಂಖ್ಯೆಯ 439.67 ಚದರ ಮೀಟರ್ ವಿಸ್ತೀರ್ಣದ ಸಿಎ ನಿವೇಶನವನ್ನು ಸಮುದಾಯ ಭವನ ನಿರ್ಮಾಣಕ್ಕಾಗಿ ಜಿಲ್ಲಾ ಉಪ್ಪಾರ ಸಂಘಕ್ಕೆ ಹಂಚಿಕೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಅಸಂಘಟಿತ ಉಪ್ಪಾರ ಸಮುದಾಯದ ಜನರ ಶ್ರೇಯೋಭಿವೃದ್ಧಿ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಈ ನಿವೇಶನದ ಹಂಚಿಕೆ ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor