×
Ad

ಕಲಬುರಗಿ | ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ : ಜಿಲ್ಲಾ, ತಾಲೂಕು ಮಾಹಿತಿ ಕೇಂದ್ರಗಳಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪನೆ

Update: 2025-09-24 20:30 IST

ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಈಗಾಗಲೇ ಸೆ.22 ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಕಾರ್ಯವು ಪ್ರಾರಂಭಿಸಲಾಗಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರ ಅನುಕೂಲವಾಗುವಂತೆ ಕೆಳಕಂಡ ತಾಲೂಕುವಾರು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಾಹಿತಿ ಕೇಂದ್ರಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆದು ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ನಿಯೋಜಿಸಲಾಗಿದೆ.

ಈ ಸಾಮಾಜಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಸಂದೇಹ/ ಸಮಸ್ಯೆಗಳಿದ್ದಲ್ಲಿ ಈ ಕೆಳಕಂಡ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ ಅಗತ್ಯ ಮಾಹಿತಿಯನ್ನು ಪಡೆದು ಈ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯನ್ನು ಯಶಸ್ವಿಗೊಳಿಸಬೇಕೆಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಂಗಮೇಶ್ವರ ಇವರ ಮೊಬೈಲ್ ಸಂಖ್ಯೆ-9731685809 ಇರುತ್ತದೆ. ಅಫಜಲಪುರ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ ಸಚೀನ-9742305668 ಹಾಗೂ ಡಾಟಾ ಎಂಟ್ರಿ ಆಪರೇಟರ್-9741706046 ಇರುತ್ತದೆ.

ಜೇವರ್ಗಿ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ ಹುಲಿಕಂಠರಾಯ-9845036156 ಹಾಗೂ ಡಾಟಾ ಎಂಟ್ರಿ ಆಪರೇಟರ್-9901890910. ಆಳಂದ ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ-ಸಚೀನ 9742305668 ಹಾಗೂ ಡಾಟಾ ಎಂಟ್ರಿ ಆಪರೇಟರ್-9148001475.

ಚಿಂಚೋಳಿ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ ನವಾಬ್‌ ಮಸೂದ್ ಅಹ್ಮದ್-8971524009 ಮತ್ತು ಡಾಟಾ ಎಂಟ್ರಿ ಆಪರೇಟರ್-7406350453 ಇರುತ್ತದೆ. ಚಿತ್ತಾಪೂರ ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ-ಶೇಖ್‌ ಫಹೀಮುದ್ದಿನ್-9972554852 ಹಾಗೂ ಡಾಟಾ ಎಂಟ್ರಿ ಆಪರೇಟರ್-9663413012.

ಸೇಡಂ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ ಹಸನ್ ಚಾವೂಶ್-9886786180 ಹಾಗೂ ಡಾಟಾ ಎಂಟ್ರಿ ಆಪರೇಟರ್-9738431121. ಕಲಬುರಗಿ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ-ಸಚೀನ 9742305668 ಹಾಗೂ ಡಾಟಾ ಎಂಟ್ರಿ ಆಪರೇಟರ್ ಇವರ ಮೊಬೈಲ್ ಸಂಖ್ಯೆ 9535496381.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News