ಕಲಬುರಗಿ | ಗುಲ್ಬರ್ಗಾ ವಿಶ್ವವಿದ್ಯಾಲಯ ಹ್ಯಾಂಡ್ ಬಾಲ್ ತಂಡಕ್ಕೆ ಸೋಹಂ, ಪ್ರಜ್ವಲ್ ಆಯ್ಕೆ
Update: 2025-02-25 19:24 IST
ಕಲಬುರಗಿ : ಇಲ್ಲಿನ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂಎಸ್ಐ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಸೋಹಂ ಮತ್ತು ಪ್ರಜ್ವಲ್ ಅವರು ಗುಲ್ಬರ್ಗಾ ವಿಶ್ವವಿದ್ಯಾಲಯ ಹ್ಯಾಂಡ್ ಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳು ಫೆ.28 ರಿಂದ ಮಾ.4 ರವರೆಗೆ ತಮಿಳುನಾಡು ರಾಜ್ಯದಲ್ಲಿ ನಡೆಯಲಿರುವ ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಭಾಗವಹಿಸಲಿದ್ದಾರೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾಧ್ಯಮ ಸಂಯೋಜಕ ಐ.ಕೆ.ಪಾಟೀಲ್ ತಿಳಿಸಿದ್ದಾರೆ.